ಸೊರೆನ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಭಾಗಿ

ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಹೇಮಂತ್ ಸೊರೆನ್ ಅವರ ಜೆಎಂಎಂ ನೇತೃತ್ವದ ಮೈತ್ರಿಕೂಟ ಜಾರ್ಖಂಡ್‌ನಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದೆ.
ಹೇಮಂತ್ ಸೊರೆನ್
ಹೇಮಂತ್ ಸೊರೆನ್
Updated on

ರಾಂಚಿ: ಹೇಮಂತ್ ಸೊರೆನ್ ಅವರು ನವೆಂಬರ್ 28 ರಂದು ಮತ್ತೊಮ್ಮೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ರಾಂಚಿಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಇಂಡಿಯಾ ಮೈತ್ರಿಕೂಟ ಹಲವು ನಾಯಕರು ಭಾಗವಹಿಸಬಹುದು ಎಂದು ಸೋಮವಾರ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಹೇಮಂತ್ ಸೊರೆನ್ ಅವರ ಜೆಎಂಎಂ ನೇತೃತ್ವದ ಮೈತ್ರಿಕೂಟ ಜಾರ್ಖಂಡ್‌ನಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದ್ದು, 81 ಸದಸ್ಯ ಬಲದ ಅಸೆಂಬ್ಲಿಯಲ್ಲಿ 56 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಬಿರುಸಿನ ಪ್ರಚಾರದ ಹೊರತಾಗಿಯೂ 24 ಸ್ಥಾನಗಳಿಗೆ ತೃಪ್ತಿಪಟ್ಟಿದೆ.

ನವೆಂಬರ್ 28 ರಂದು ರಾಂಚಿಯ ಮೊರಾಬಾಡಿ ಮೈದಾನದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಇಂಡಿಯಾ ಬಣದ ಎಲ್ಲ ಪ್ರಮುಖ ನಾಯಕರನ್ನು ಆಹ್ವಾನಿಸಲಾಗಿದೆ.

ಹೇಮಂತ್ ಸೊರೆನ್
ಜಾರ್ಖಂಡ್ : ನವೆಂಬರ್ 28ಕ್ಕೆ ನೂತನ ಸಿಎಂ ಆಗಿ ಜೆಎಂಎಂನ ಹೇಮಂತ್ ಸೊರೆನ್ ಪದ ಗ್ರಹಣ!

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಪಾಲ್ಗೊಳ್ಳುವ ಸಾಧ್ಯತೆ ಇದೆ. ಘಟನೆ" ಎಂದು ಕಾಂಗ್ರೆಸ್ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com