ನಮಗೆ ಇವಿಎಂ ಬೇಡ: ಮಹಾರಾಷ್ಟ್ರ ಹೀನಾಯ ಸೋಲಿನ ಬೆನ್ನಲ್ಲೇ ಬ್ಯಾಲೆಟ್ ಪೇಪರ್‌ಗೆ ಪಟ್ಟು ಹಿಡಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನಮಗೆ ಇವಿಎಂ ಮೂಲಕ ಚುನಾವಣೆ ಬೇಡ. ನಾವು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಯನ್ನು ಬಯಸುತ್ತೇವೆ. ನಾವು 'ಭಾರತ್ ಜೋಡೋ ಯಾತ್ರೆ' ನಡೆಸಿದಂತೆಯೇ, ನಾವು ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆಗಾಗಿ ರಾಷ್ಟ್ರವ್ಯಾಪಿ ಪ್ರಚಾರವನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.
Mallikarjun Kharge
ಮಲ್ಲಿಕಾರ್ಜುನ್ ಖರ್ಗೆ
Updated on

ನವದೆಹಲಿ: ನಮಗೆ ವಿದ್ಯುನ್ಮಾನ ಮತಯಂತ್ರಗಳ (EVM) ಮೇಲೆ ನಂಬಿಕೆ ಇಲ್ಲ. ಹೀಗಾಗಿ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ನಲ್ಲಿ ನಡೆಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಪಕ್ಷದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಖರ್ಗೆ, ನಮಗೆ ಇವಿಎಂ ಮೂಲಕ ಚುನಾವಣೆ ಬೇಡ. ನಾವು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಯನ್ನು ಬಯಸುತ್ತೇವೆ. ನಾವು 'ಭಾರತ್ ಜೋಡೋ ಯಾತ್ರೆ' ನಡೆಸಿದಂತೆಯೇ, ನಾವು ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆಗಾಗಿ ರಾಷ್ಟ್ರವ್ಯಾಪಿ ಪ್ರಚಾರವನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.

ಮತಯಂತ್ರಗಳನ್ನು ಟ್ಯಾಂಪರಿಂಗ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವ ಸಾಂಪ್ರದಾಯಿಕ ವಿಧಾನಕ್ಕೆ ಮರಳುವಂತೆ ಕಾಂಗ್ರೆಸ್ ಅಧ್ಯಕ್ಷರು ಒತ್ತಾಯಿಸಿದ ಕೆಲವೇ ಗಂಟೆಗಳ ನಂತರ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಕಟುವಾಗಿ ಟೀಕಿಸಿದ್ದಾರೆ. ಇಂತಹ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಅಧ್ಯಕ್ಷರು ಸುಪ್ರೀಂ ಕೋರ್ಟ್ ಆದೇಶಕ್ಕೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದಾಗ (ಕರ್ನಾಟಕ, ಜಮ್ಮು-ಕಾಶ್ಮೀರ, ತೆಲಂಗಾಣ, ವಯನಾಡು, ಹಿಮಾಚಲ ಪ್ರದೇಶ, ಜಾರ್ಖಂಡ್‌ನಲ್ಲಿ) ಖರ್ಗೆ ಅವರಿಗೆ ಚುನಾವಣಾ ಆಯೋಗ ಮತ್ತು ಇವಿಎಂಗಳು ಸರಿಯಾಗಿ ಕಾರ್ಯನಿರ್ವಹಿಸುತ್ತವೆ. ಆದರೆ ಬಿಜೆಪಿ ಗೆದ್ದರೆ ಇವಿಎಂಗಳು ಸರಿ ಇರಲ್ಲ. ತಮ್ಮ ಸೋಲನ್ನು ಕಾಂಗ್ರೆಸ್ಸಿಗರು ಪಕ್ಷ ಸಂವಿಧಾನ ಮತ್ತು ಇವಿಎಂಗಳ ಮೇಲೆ ದೂಷಿಸಲು ಪ್ರಯತ್ನಿಸುತ್ತಾರೆ ಎಂದು ಟೀಕಿಸಿದರು.

Mallikarjun Kharge
ಮಹಾರಾಷ್ಟ್ರ: MVA ಸೋಲಿಗೆ ರಾಹುಲ್ ಗಾಂಧಿಯ 'ಮೂರು ಪ್ರಮಾದ' ಕಾರಣ; INDIA ಮೈತ್ರಿಪಕ್ಷಗಳ ದೂಷಣೆ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅತ್ಯಧಿಕ 132 ಸ್ಥಾನಗಳನ್ನು ಗೆದ್ದು ಕೊಂಡರೆ ಶಿಂಧೆ ನೇತೃತ್ವದ ಶಿವಸೇನೆ 57 ಸ್ಥಾನಗಳನ್ನು ಮತ್ತು ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದು ಮಹಾಯುತಿಯನ್ನು 230 ಸ್ಥಾನಗಳಿಗೆ ಕೊಂಡೊಯ್ಯಿತು. ಎಂವಿಎ ಭಾಗವಾಗಿ ಕಾಂಗ್ರೆಸ್ ಕೇವಲ 16 ಸ್ಥಾನಗಳನ್ನು ಗೆದ್ದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com