ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜಿನಾಮೆ!

ಹೊಸ ಸಿಎಂ ಪ್ರಮಾಣ ವಚನ ಸ್ವೀಕರಿಸುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಂತೆ ಶಿಂಧೆ ಅವರಿಗೆ ರಾಜ್ಯಪಾಲರು ಸೂಚಿಸಿದರು..
Eknath Shinde resigns as Maharashtra CM
ರಾಜಿನಾಮೆ ಸಲ್ಲಿಸಿದ ಏಕನಾಥ್ ಶಿಂಧೆ
Updated on

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮುಕ್ತಾಯದ ಬೆನ್ನಲ್ಲೇ ನೂತನ ಸರ್ಕಾರ ರಚನೆಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮುಂಬೈನ ರಾಜಭವನದಲ್ಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ವೇಳೆ ಉಪ ಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಕೂಡ ಇದ್ದಾರೆ.

Eknath Shinde resigns as Maharashtra CM
ಮಹಾರಾಷ್ಟ್ರ ಸೋಲು: ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ವದಂತಿ ತಳ್ಳಿಹಾಕಿದ ಪಟೋಲೆ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಒಳಗೊಂಡ ಮಹಾಯುತಿ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಹೊಸ ಸಿಎಂ ಪ್ರಮಾಣ ವಚನ ಸ್ವೀಕರಿಸುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಂತೆ ಶಿಂಧೆ ಅವರಿಗೆ ರಾಜ್ಯಪಾಲರು ಸೂಚಿಸಿದರು ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭೆಯ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ ಮಹಾಯುತಿ ಮೈತ್ರಿಕೂಟವು 288 ಸದಸ್ಯ ಬಲದ ವಿಧಾನಸಭೆಯಲ್ಲಿ 230 ಸ್ಥಾನಗಳನ್ನು ಗೆದ್ದು ಭಾರಿ ಗೆಲುವು ಸಾಧಿಸಿದ್ದರೂ, ಮುಂದಿನ ಸಿಎಂ ಯಾರಾಗಬೇಕೆಂಬುದರ ಬಗ್ಗೆ ಆಡಳಿತಾರೂಢ ಒಕ್ಕೂಟದ ನಾಯಕರಿಂದ ಒಮ್ಮತ ಬರಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com