ಚೆನ್ನೈ: ನೈಋತ್ಯ ಬಂಗಾಳಕೊಲ್ಲಿಯಲ್ಲಿನ ಆಳವಾದ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ತೀವ್ರಗೊಂಡು ತಮಿಳುನಾಡು ಕರಾವಳಿಯತ್ತ ಚಲಿಸುವ ನಿರೀಕ್ಷೆಯಿದೆ, ಇನ್ನು ಎರಡು ದಿನಗಳಲ್ಲಿ ಶ್ರೀಲಂಕಾದ ಕರಾವಳಿಯನ್ನು ದಾಟುತ್ತದೆ. ಒಮ್ಮೆ ರೂಪುಗೊಂಡ ನಂತರ, ಚಂಡಮಾರುತಕ್ಕೆ 'ಫೆಂಗಲ್' ಎಂದು ಹೆಸರಿಸಲಾಗುತ್ತದೆ.
ಶ್ರೀಲಂಕಾದ ಟ್ರಿಂಕೋಮಲಿಯ ಆಗ್ನೇಯಕ್ಕೆ 310 ಕಿಮೀ, ಪುದುಚೇರಿಯ ದಕ್ಷಿಣ ಆಗ್ನೇಯಕ್ಕೆ 710 ಕಿಮೀ ಮತ್ತು ಚೆನ್ನೈನಿಂದ 800 ಕಿಮೀ ಆಗ್ನೇಯಕ್ಕೆ ಇದೆ ಎಂದು ಭಾರತ ಹವಾಮಾನ ಇಲಾಖೆ (IMD) ಹೇಳಿದೆ. ವಾಯುಭಾರ ಕುಸಿತದಿಂದ ಉತ್ತರ-ವಾಯುವ್ಯದ ಕಡೆಗೆ ಚಲಿಸುತ್ತದೆ, ಚಂಡಮಾರುತವಾಗಿ ರೂಪುಗೊಂಡು ಮುಂದಿನ ಎರಡು ದಿನಗಳಲ್ಲಿ ತಮಿಳುನಾಡಿನ ಕರಾವಳಿ ಪ್ರದೇಶಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ಕಡಲೂರು ಮತ್ತು ಮೈಲಾಡುತುರೈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಇಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ, ಅರಿಯಲೂರ್, ತಂಜಾವೂರು, ತಿರುವರೂರ್, ನಾಗಪಟ್ಟಣಂ ಮತ್ತು ಪುದುಕೊಟ್ಟೈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 65 ಕಿಮೀ ವೇಗದಲ್ಲಿ ಗಾಳಿ ಬೀಸುತ್ತದೆ, ಕರಾವಳಿಯುದ್ದಕ್ಕೂ ಸಮುದ್ರದ ಪ್ರಕ್ಷುಬ್ಧತೆ ಇರುತ್ತದೆ.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಾದೇಶಿಕ ಹವಾಮಾನ ಕೇಂದ್ರ (ಚೆನ್ನೈ) ನಿರ್ದೇಶಕ ಎಸ್ ಬಾಲಚಂದ್ರನ್, ತೀವ್ರ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬೆಳೆದು ಭೂಕುಸಿತವಾಗಬಹುದು ಎಂದರು. ಸದ್ಯದ ಪರಿಸ್ಥಿತಿಯ ಪ್ರಕಾರ, ಇದು ತಮಿಳುನಾಡು ಕರಾವಳಿಯಲ್ಲಿ ಭೂಕುಸಿತವಾಗುವ ನಿರೀಕ್ಷೆಯಿದೆ ಎಂದು ಹೇಳಿದರು.
ರಾಜ್ಯದ ಕರಾವಳಿ ಜಿಲ್ಲೆಗಳಾದ ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ತಿರುವಳ್ಳೂರು, ಕಡಲೂರು ಮತ್ತು ನಾಗಪಟ್ಟಣಂ ಸೇರಿದಂತೆ ಕಾವೇರಿ ಡೆಲ್ಟಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನಿನ್ನೆ ಸಾಯಂಕಾಲ ತಮಿಳು ನಾಡಿನ ನಾಗಪಟ್ಟಿಣಂನಲ್ಲಿ 127 ಮಿಮೀ ಅತಿ ಹೆಚ್ಚು ಮಳೆ ದಾಖಲಾಗಿದೆ, ಕಡಲೂರು (67 ಮಿಮೀ) ಮತ್ತು ತಂಜಾವೂರಿನ ಅದಿರಾಮ್‌ಪಟ್ಟಿಣಂ (54 ಮಿಮೀ). ಚೆನ್ನೈಯಲ್ಲಿ ಕೂಡ ಸಾಕಷ್ಟು ಮಳೆಯಾಗಿದೆ. ಮೀನಂಬಾಕ್ಕಂ ಮತ್ತು ನುಂಗಂಬಾಕ್ಕಂ ವೀಕ್ಷಣಾಲಯಗಳು ಕ್ರಮವಾಗಿ 45.8 ಮಿಮೀ ಮತ್ತು 41.8 ಮಿಮೀ ದಾಖಲಾಗಿವೆ.
ಪುದುಚೆರಿ, ಅರಿಯಲೂರು ಮತ್ತು ರಾಮನಾಥಪುರದಲ್ಲಿ ಕ್ರಮವಾಗಿ 25 ಮಿಮೀ, 22 ಮಿಮೀ ಮತ್ತು 19 ಮಿಮೀ ಮಳೆಯಾಗಿದೆ. ಹವಾಮಾನ ಇಲಾಖೆಯ ಅಧಿಕಾರಿಗಳು ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸುತ್ತಿದ್ದಾರೆ ಎಂದು ತಿಳಿಸಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ, ತಗ್ಗು ಪ್ರದೇಶದ ನಿವಾಸಿಗಳು ಜಾಗರೂಕರಾಗಿರಲು ಎಚ್ಚರಿಕೆ ನೀಡಲಾಗಿದೆ.
ರೆಡ್ ಅಲರ್ಟ್ - ಕಡಲೂರು ಮತ್ತು ಮೈಲಾಡುತುರೈ ಜಿಲ್ಲೆಗಳು ಮತ್ತು ಕಾರೈಕಲ್ ಗಳಲ್ಲಿ
ಆರೆಂಜ್ ಅಲರ್ಟ್ - ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ, ಅರಿಯಲೂರ್, ತಂಜಾವೂರು, ತಿರುವರೂರ್, ನಾಗಪಟ್ಟಣಂ ಮತ್ತು ಪುದುಕೊಟ್ಟೈ ಜಿಲ್ಲೆಗಳು ಮತ್ತು ಪುದುಚೇರಿ
ಯಲ್ಲೋ ಅಲರ್ಟ್ - ರಾಣಿಪೇಟ್, ತಿರುವಣ್ಣಾಮಲೈ, ಕಲ್ಲಕುರಿಚಿ, ಪೆರಂಬಲೂರು, ತಿರುಚ್ಚಿ, ಶಿವಗಂಗಾ ಮತ್ತು ರಾಮನಾಥಪುರಂ ಜಿಲ್ಲೆಗಳು
ನಾಳೆ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ರಾಣಿಪೇಟ್, ತಿರುವಣ್ಣಾಮಲೈ, ಕಲ್ಲಕುರಿಚಿ ಮತ್ತು ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಾಗೂ ಶುಕ್ರವಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು ಮತ್ತು ರಾಣಿಪೇಟ್ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement