ಗುಜರಾತ್‌ನ ಲೋಥಾಲ್‌ನ ಪುರಾತತ್ವ ಸ್ಥಳದ ಬಳಿ ಬುಧವಾರ ಬೆಳಗ್ಗೆ ಸಂಶೋಧನೆ ನಡೆಸುತ್ತಿದ್ದಾಗ ಮಣ್ಣು ಕುಸಿದು ಐಐಟಿ ದೆಹಲಿಯ ವಿದ್ಯಾರ್ಥಿ ಸಾವನ್ನಪ್ಪಿದ್ದು ಮೂವರು ಗಾಯಗೊಂಡಿದ್ದಾರೆ.
ಐಐಟಿ ದೆಹಲಿಯ ಪಿಎಚ್‌ಡಿ ವಿದ್ವಾಂಸ ಸುರ್ಭಿ ವರ್ಮಾ (23) ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಹಮದಾಬಾದ್‌ನಿಂದ ಸುಮಾರು 80 ಕಿಲೋಮೀಟರ್ ದೂರದಲ್ಲಿರುವ ಪುರಾತನ ಸಿಂಧೂ ಕಣಿವೆ ನಾಗರಿಕತೆಯ ಸ್ಥಳದಲ್ಲಿ ಸಂಶೋಧನೆ ಮಾಡಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ.
ಐಐಟಿ ದೆಹಲಿಯ ಇಬ್ಬರು ಮತ್ತು ಐಐಟಿ ಗಾಂಧಿನಗರದ ಇಬ್ಬರು ಸೇರಿದಂತೆ ನಾಲ್ವರ ಸಂಶೋಧಕರ ತಂಡವು ಅಧ್ಯಯನಕ್ಕಾಗಿ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಲು ಹರಪ್ಪ ಬಂದರು ನಗರ ಲೋಥಾಲ್‌ನ ಪುರಾತತ್ವ ಅವಶೇಷಗಳಿಗೆ ತೆರಳಿತ್ತು ಎಂದು ಪೊಲೀಸ್ ಅಧೀಕ್ಷಕ (ಗ್ರಾಮೀಣ) ಓಂ ಪ್ರಕಾಶ್ ಜಾಟ್ ಹೇಳಿದ್ದಾರೆ.
ನಾಲ್ವರೂ 10 ಅಡಿ ಆಳದ ಗುಂಡಿಗೆ ಬಿದ್ದಿದ್ದಾರೆ. ಅದೇ ಸಮಯದಲ್ಲಿ ಗೋಡೆ ಕುಸಿದು ಮಣ್ಣಿನ ರಾಶಿಯ ಅಡಿಯಲ್ಲಿ ಹೂತುಹೋಗಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಐಐಟಿ ದೆಹಲಿಯ ಸಂಶೋಧಕಿ ಸುರಭಿ ವರ್ಮಾ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.
Advertisement