ಅದಾನಿ ಲಂಚ ಪ್ರಕರಣ ಸೇರಿ ಹಲವು ವಿಷಯಗಳ ಬಗ್ಗೆ ತೀವ್ರ ಗದ್ದಲ, ಕೋಲಾಹಲ: ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಲಂಚ ಆರೋಪ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆಗೆ ಪ್ರತಿಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದರಿಂದ ರಾಜ್ಯಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.
Members leave the Lok Sabha and Rajya Sabha after parliamentary proceedings in both houses were adjourned for the day on Wednesday, Nov. 27, 2024.
ಲೋಕಸಭೆಯಲ್ಲಿ ತೀವ್ರ ಗದ್ದಲ, ಕೋಲಾಹಲ
Updated on

ನವದೆಹಲಿ: ಗೌತಮ್ ಅದಾನಿ ಲಂಚ ವಿವಾದ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ವಿಷಯಗಳ ಕುರಿತು ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಇಂದು ಅಧಿವೇಶನದ ಆರಂಭದಲ್ಲಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ಮತ್ತು ವಿವಿಧ ವಿಷಯಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದ್ದರಿಂದ ಲೋಕಸಭೆಯ ಕಲಾಪವನ್ನು ಆರಂಭದಲ್ಲಿ ಮಧ್ಯಾಹ್ನ 12 ರವರೆಗೆ ಮತ್ತು ನಂತರ ನಾಳೆವರೆಗೆ ಮುಂದೂಡಲಾಯಿತು.

ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಕೆಲವು ಸದಸ್ಯರು ಬಾವಿಗಿಳಿದರೆ ಇತರ ವಿರೋಧ ಪಕ್ಷದ ಸದಸ್ಯರು ಹಜಾರದಲ್ಲಿ ನಿಂತು ಘೋಷಣೆಗಳನ್ನು ಕೂಗಿದರು.

ಪ್ರತಿಪಕ್ಷದ ಸದಸ್ಯರು ಅದಾನಿ ವಿವಾದ ಮತ್ತು ಸಂಭಾಲ್‌ನಲ್ಲಿ ಇತ್ತೀಚಿನ ಹಿಂಸಾಚಾರದ ಬಗ್ಗೆ ಚರ್ಚಿಸಲು ಬಯಸಿದರು, ಸ್ಪೀಕರ್ ಓಂ ಬಿರ್ಲಾ ಅವರು ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡುವಂತೆ ವಿರೋಧ ಪಕ್ಷದ ಸದಸ್ಯರನ್ನು ಕೇಳಿದರು. ಗದ್ದಲದ ನಡುವೆ, ಒಂದು ಪ್ರಶ್ನೆಯನ್ನು ಚರ್ಚೆಗೆ ಕೈಗೆತ್ತಿಕೊಳ್ಳಲಾಯಿತು.

ಆದರೆ, ಪ್ರತಿಭಟನೆ ಮುಂದುವರಿದಿದ್ದು, ಸುಮಾರು ಆರು ನಿಮಿಷಗಳ ಕಾಲ ನಡೆದ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಲಂಚ ಆರೋಪ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆಗೆ ಪ್ರತಿಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದರಿಂದ ರಾಜ್ಯಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಬೆಳಗಿನ ಅಧಿವೇಶನದಲ್ಲಿ ಕಲಾಪವನ್ನು ಸಂಕ್ಷಿಪ್ತವಾಗಿ ಮುಂದೂಡಲಾಯಿತು,11.30 ಕ್ಕೆ ಸದನವು ಪುನಃ ಸೇರಿದಾಗ, ಅದೇ ಪರಿಸ್ಥಿತಿ ಪುನಾರಂಭವಾಯಿತು. ಇದರಿಂದ ಸಭಾಪತಿ ಜಗದೀಪ್ ಧನ್ ಕರ್ ಅವರು ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಿದರು.

Members leave the Lok Sabha and Rajya Sabha after parliamentary proceedings in both houses were adjourned for the day on Wednesday, Nov. 27, 2024.
Gautam Adani: ಬಿಲಿಯನೇರ್ ವಿರುದ್ಧ ಅಮೆರಿಕಾದಲ್ಲಿ 265 ಮಿಲಿಯನ್ ಡಾಲರ್ ವಂಚನೆ ಆರೋಪ

ಮೊನ್ನೆ ಸೋಮವಾರ, ವಿರೋಧ ಪಕ್ಷಗಳು ಅದಾನಿ ದೋಷಾರೋಪಣೆಯ ವಿಷಯವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದ ನಂತರ ಸಂಸತ್ತಿನ ಕಲಾಪವನ್ನು ಇಂದಿಗೆ ಮುಂದೂಡಲಾಗಿತ್ತು. ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಇನ್ನೊಬ್ಬ ಪ್ರಮುಖ ಕಾರ್ಯನಿರ್ವಾಹಕ ವನೀತ್ ಜೈನ್, ಸೌರ ವಿದ್ಯುತ್ ಪೂರೈಕೆಯ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಲಂಚ ನೀಡುವ ಯೋಜನೆಯ ಭಾಗವಾಗಿದೆ ಎಂದು ಅಮೆರಿಕ ನ್ಯಾಯಾಂಗ ಇಲಾಖೆ ಆರೋಪಿಸಿದೆ. 20 ವರ್ಷಗಳ ಅವಧಿಯಲ್ಲಿ 2 ಬಿಲಿಯನ್ ಡಾಲರ್ ಲಾಭವನ್ನು ನೀಡುತ್ತದೆ.

ಆಪಾದಿತ ಲಂಚ ಪ್ರಕರಣದಲ್ಲಿ ಸಲ್ಲಿಸಲಾದ ದೋಷಾರೋಪ ಪಟ್ಟಿಯಲ್ಲಿ ಗೌತಮ್ ಅದಾನಿ ಅಥವಾ ಅವರ ಸೋದರಳಿಯ ಸಾಗರ್ ಅವರು ಯುಎಸ್ ವಿದೇಶಿ ಭ್ರಷ್ಟ ಆಚರಣೆಗಳ ಕಾಯ್ದೆ (FCPA) ಯ ಯಾವುದೇ ಉಲ್ಲಂಘನೆಯ ಆರೋಪ ಹೊರಿಸಿಲ್ಲ ಎಂದು ಅದಾನಿ ಗ್ರೂಪ್ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com