ಕೋಲ್ಕತ್ತಾ: ನೆರೆಯ ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಗುರುವಾರ ತೀವ್ರ ಕಳವಳ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಬೇರೆ ದೇಶಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ.
ಇಂದು ವಿಧಾನಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಾಂಗ್ಲಾದೇಶದ ಸಮಸ್ಯೆಯನ್ನು ಕೇಂದ್ರ ಸರ್ಕಾರ ಪರಿಹರಿಸಬೇಕಾಗಿದ್ದು, ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.
"ಬಾಂಗ್ಲಾದೇಶ ವಿಭಿನ್ನ ದೇಶ. ಭಾರತ ಸರ್ಕಾರ ಆ ಬಗ್ಗೆ ಪರಿಶೀಲಿಸುತ್ತದೆ. ಅದು ನಮ್ಮ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ. ನಾವು ಅದರ ಬಗ್ಗೆ ಮಾತನಾಡಬಾರದು ಅಥವಾ ಮಧ್ಯಪ್ರವೇಶಿಸಬಾರದು. ನಾವು ಒಳಗೆ ವಿಷಾದಿಸುತ್ತಿದ್ದರೂ, ಕೇಂದ್ರದ ನೀತಿಗಳನ್ನು ಅನುಸರಿಸುತ್ತೇವೆ" ಪಶ್ಚಿಮ ಬಂಗಾಳ ಸಿಎಂ ತಿಳಿಸಿದ್ದಾರೆ.
ಈ ವಿಷಯದ ಬಗ್ಗೆ ಇಸ್ಕಾನ್ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಆದರೆ ಆ ಬಗ್ಗೆ ಹೆಚ್ಚಿನ ವಿವರ ನೀಡಲು ನಿರಾಕರಿಸಿದರು.
Advertisement