ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ. ಸಂಜೆ 4.19 ರ ವೇಳೆಗೆ ಕಣಿವೆಯಲ್ಲಿ ಭೂಕಂಪನ ಸಂಭವಿಸಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಯಾವುದೇ ಜೀವ ಹಾನಿ ಸಂಭವಿಸಿಲ್ಲ ಹಾಗೂ ಆಸ್ತಿಗಳಿಗೆ ಹಾನಿಯುಂಟಾಗಿಲ್ಲ.
ಭೂಕಂಪನದ ಕೇಂದ್ರಬಿಂದು ಅಫ್ಘಾನಿಸ್ಥಾನದಲ್ಲಿದ್ದು, 36.49 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 71.27 ಡಿಗ್ರಿ ಪೂರ್ವ ರೇಖಾಂಶ, 165 ಕಿಮೀ ಆಳದಲ್ಲಿ ಕೇಂದ್ರಬಿಂದು ಇದೆ ಎಂದು ತಿಳಿಸಿದ್ದಾರೆ.
ಕಾಶ್ಮೀರ ಕಣಿವೆಯಲ್ಲಿ ಇದುವರೆಗೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
Advertisement