ವಿವಾದದ ನಂತರ ವಕ್ಫ್ ಮಂಡಳಿಗೆ 10 ಕೋಟಿ ರೂ ಮಂಜೂರು ಆದೇಶ ಹಿಂಪಡೆದ ಮಹಾರಾಷ್ಟ್ರ ಸರ್ಕಾರ

ನಿನ್ನೆಯಷ್ಟೇ ರಾಜ್ಯ ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಮಂಜೂರು ಮಾಡಿ ನೂತನ ಮಹಾರಾಷ್ಟ್ರ ಸರ್ಕಾರ ಆದೇಶಿಸಿತ್ತು.
Maharashtra CM and DCM
ಮಹಾರಾಷ್ಟ್ರ ಸಿಎಂ ಶಿಂಧೆ-ಡಿಸಿಎಂ ದೇವೇಂದ್ರ ಫಡ್ನವಿಸ್ online desk
Updated on

ಮುಂಬೈ: ಮಹಾರಾಷ್ಟ್ರ ರಾಜ್ಯ ವಕ್ಫ್ ಮಂಡಳಿಯನ್ನು ಬಲವರ್ಧನೆಗೆ 10 ಕೋಟಿ ರೂಪಾಯಿ ಮಂಜೂರು ಮಾಡಿದ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಹಿಂಪಡೆದಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಅವರು ತಿಳಿಸಿದ್ದಾರೆ.

ನಿನ್ನೆಯಷ್ಟೇ ರಾಜ್ಯ ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಮಂಜೂರು ಮಾಡಿ ನೂತನ ಮಹಾರಾಷ್ಟ್ರ ಸರ್ಕಾರ ಆದೇಶಿಸಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ನಂತರ ಇಂದು ಆದೇಶ ಹಿಂಪಡೆಯಲಾಗಿದೆ.

ನವೆಂಬರ್ 28 ರ ಸರ್ಕಾರಿ ಆದೇಶದ ಪ್ರಕಾರ, ಮಹಾರಾಷ್ಟ್ರ ರಾಜ್ಯ ವಕ್ಫ್ಸ್ ಬೋರ್ಡ್(MSBW) ಬಲವರ್ಧನೆಗಾಗಿ 2024-25ಕ್ಕೆ 20 ಕೋಟಿ ರೂ. ಮೀಸಲಿಡಲಾಗಿದ್ದು, ಅದರಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಮಂಜೂರು ಮಾಡಲಾಗಿತ್ತು.

ಮಹಾರಾಷ್ಟ್ರ ಸರ್ಕಾರದ ಈ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ತೀವ್ರ ವಿರೋಧ ವ್ಯಕ್ತಪಡಿಸಿತ್ತು.

Maharashtra CM and DCM
'ಇನ್ನೊಂದೆರಡು ದಿನಗಳೊಳಗೆ ಮಹಾರಾಷ್ಟ್ರ ಸಿಎಂ ನಿರ್ಧಾರ': ಅಮಿತ್ ಶಾ ಭೇಟಿ ಬಳಿಕ ಏಕನಾಥ್ ಶಿಂಧೆ ಪ್ರತಿಕ್ರಿಯೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com