ನಾಳೆ ವಯನಾಡಿನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಿಯಾಂಕಾ, ರಾಹುಲ್ ಗಾಂಧಿ ಭಾಷಣ

ಪ್ರಿಯಾಂಕಾ ಗಾಂಧಿ ಅವರು ವಯನಾಡ್ ಸಂಸದೆಯಾಗಿ ಮೊದಲ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ
Updated on

ನವದೆಹಲಿ: ವಯನಾಡ್ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನವೆಂಬರ್ 30 ರಂದು ತಮ್ಮ ಸಹೋದರ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕೇರಳದ ತಮ್ಮ ಕ್ಷೇತ್ರದಲ್ಲಿ ಜಂಟಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ಶುಕ್ರವಾರ ತಿಳಿಸಿವೆ.

ಪ್ರಿಯಾಂಕಾ ಗಾಂಧಿ ಅವರು ವಯನಾಡ್ ಸಂಸದೆಯಾಗಿ ಮೊದಲ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.

ಶನಿವಾರ ಮಧ್ಯಾಹ್ನ ಕೋಝಿಕ್ಕೋಡ್ ಜಿಲ್ಲೆಯ ತಿರುವಂಬಾಡಿ ವಿಧಾನಸಭಾ ಕ್ಷೇತ್ರದ ಮುಕ್ಕಂನಲ್ಲಿ ಜಂಟಿ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ
ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

ತರುವಾಯ, ನಿಲಂಬೂರಿನ ಕರುಳೈ, ವಂಡೂರ್ ಮತ್ತು ಎರನಾಡಿನ ಎಡವನ್ನಾದಲ್ಲಿ ಕ್ರಮವಾಗಿ ಮಧ್ಯಾಹ್ನ 2.15, 3.30 ಮತ್ತು 4.30ಕ್ಕೆ ಸಾರ್ವಜನಿಕ ಸಭೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.

ಪ್ರಿಯಾಂಕಾ ಅವರು ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ 4,10,931 ಮತಗಳ ಭಾರೀ ಅಂತರದಿಂದ ಗೆಲ್ಲುವ ಮೂಲಕ ಚುನಾವಣಾ ರಾಜಕೀಯ ಆರಂಭಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ಗುರುವಾರ ಲೋಕಸಭೆಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com