Sambhal mosque row: ಮಸೀದಿ ಸಮೀಕ್ಷೆ ಕುರಿತ ಟ್ರಯಲ್ ಕೋರ್ಟ್ ವಿಚಾರಣೆಗೆ 'ಸುಪ್ರೀಂ' ತಡೆ; ಶಾಂತಿ ಕಾಪಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ

ಸರ್ವೆ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿಯ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಪಟ್ಟಿ ಮಾಡುವವರೆಗೆ ಸಂಭಾಲ್ ಜಾಮಾ ಮಸೀದಿ ವಿರುದ್ಧದ ಮೊಕದ್ದಮೆಯನ್ನು ಮುಂದುವರಿಸದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಉತ್ತರ ಪ್ರದೇಶದ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.
Supreme Court
ಸುಪ್ರೀಂ ಕೋರ್ಟ್
Updated on

ನವದೆಹಲಿ: ಉತ್ತರ ಪ್ರದೇಶದ ಸಂಭಾಲ್ ನ ಜಾಮಾ ಮಸೀದಿ ಸಮೀಕ್ಷೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ ಸಮೀಕ್ಷೆ ಕುರಿತ ಟ್ರಯಲ್ ಕೋರ್ಟ್ ವಿಚಾರಣೆಗೆ 'ಸುಪ್ರೀಂ ಕೋರ್ಟ್' ಶುಕ್ರವಾರ ತಡೆ ನೀಡಿದ್ದು, ಶಾಂತಿ ಕಾಪಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಿದೆ.

ಸರ್ವೆ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿಯ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಪಟ್ಟಿ ಮಾಡುವವರೆಗೆ ಸಂಭಾಲ್ ಜಾಮಾ ಮಸೀದಿ ವಿರುದ್ಧದ ಮೊಕದ್ದಮೆಯನ್ನು ಮುಂದುವರಿಸದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಉತ್ತರ ಪ್ರದೇಶದ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ. ಅಲ್ಲದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

"ಅಡ್ವೊಕೇಟ್ ಕಮಿಷನರ್ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಇಡುವಂತೆ ಮತ್ತು ಅದನ್ನು ತೆರೆಯದಂತೆ ನಾವು ನಿರ್ದೇಶಿಸುತ್ತೇವೆ. ಯಾವುದೇ ಕಾರಣಕ್ಕೂ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು" ಎಂದು ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಹೇಳಿದೆ ಎಂದು ನ್ಯಾಯಮೂರ್ತಿ ಸಂಜಯ್ ಕುಮಾರ್ ಹೇಳಿದರು.

Supreme Court
Sambhal mosque row: 10 ದಿನಗಳಲ್ಲಿ ಸಮೀಕ್ಷಾ ವರದಿ ಸಲ್ಲಿಕೆಗೆ ಉತ್ತರ ಪ್ರದೇಶ ಕೋರ್ಟ್ ಆದೇಶ, ವಿಚಾರಣೆ ಜನವರಿ 8ಕ್ಕೆ ಮುಂದೂಡಿಕೆ

ಮಸೀದಿಯ ಸರ್ವೇಗೆ ಆದೇಶ ನೀಡಿರುವ ವಿಚಾರಣಾ ನ್ಯಾಯಾಲಯವು ಮುಂದಿನ ಯಾವುದೇ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದೂ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. "ಅವರು (ಮಸೀದಿ ಸಮಿತಿ) ಹೈಕೋರ್ಟ್‌ಗೆ ತೆರಳುವವರೆಗೆ ಯಾವುದೇ ಅಹಿತಕರ ಘಟನೆಗಳು ಆಗಬಾರದು ಎಂದು ನಾವು ಬಯಸುತ್ತೇವೆ. ವಿಚಾರಣಾ ನ್ಯಾಯಾಲಯವು ತನ್ನ ಆದೇಶವನ್ನು ಜಾರಿಗೆ ತರಬಾರದು" ಎಂದು ಪೀಠದ ನೇತೃತ್ವ ವಹಿಸಿದ್ದ ಸಿಜೆಐ ಹೇಳಿದರು.

ಗುರುವಾರ, ಸಂಭಾಲ್ ಶಾಹಿ ಜಾಮಾ ಮಸೀದಿ ಸಮಿತಿ (ಎಸ್‌ಎಸ್‌ಜೆಎಂಸಿ) ಸಿವಿಲ್ ನ್ಯಾಯಾಧೀಶರು ನೀಡಿದ್ದ ಸರ್ವೇ ಕಾರ್ಯಕ್ಕೆ ಅನುಮತಿ ನೀಡುವ ನವೆಂಬರ್ 19 ರ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಮನವಿ ಸಲ್ಲಿಸಿದೆ, ಜಿಲ್ಲಾ ನ್ಯಾಯಾಲಯದ ಮುಂದೆ ದಾವೆಯ ನಂತರ "ತರಾತುರಿ" ಯಲ್ಲಿ ಸಮೀಕ್ಷೆಗೆ ಆದೇಶಿಸಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ. ಅದರಂತೆ ಇಂದು ಸುಪ್ರೀಂ ಕೋರ್ಟ್‌ಗೆ ಎಸ್‌ಎಸ್‌ಜೆಎಂಸಿ ಸಲ್ಲಿಸಿದ ಮನವಿಯ ತುರ್ತು ವಿಚಾರಣೆ ಕೋರಲಾಗಿತ್ತು. ಇಂದು ಶುಕ್ರವಾರದಂದು ವಿಚಾರಣೆ ನಡೆಸಲು ಉನ್ನತಾಧಿಕಾರಿಗಳು ಒಪ್ಪಿಕೊಂಡಿದ್ದರು.

Supreme Court
ಸಂಭಾಲ್ ಹಿಂಸಾಚಾರ ಬೆನ್ನಲ್ಲೆ ಅಜ್ಮೀರ್ ದರ್ಗಾ ಕುರಿತ ಅರ್ಜಿ ವಿಚಾರಣೆಗೆ ಕೋರ್ಟ್ ಸಮ್ಮತಿ; ದರ್ಗಾ ಸಮಿತಿಗೆ ಸಮನ್ಸ್

ಏನಿದು ಪ್ರಕರಣ?

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಮೊಘಲರ ಕಾಲದ ಮಸೀದಿಯ ಸರ್ವೆ ನಡೆಸುವಂತೆ ಜಿಲ್ಲಾ ನ್ಯಾಯಾಲಯವು ನವೆಂಬರ್ 19 ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ವಿಚಾರಣೆ ನಡೆಸಿತು. ಪ್ರಾಚೀನ ಹರಿಹರ ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ನವೆಂಬರ್ 29 ರ ಕಾರಣ ಪಟ್ಟಿಯ ಪ್ರಕಾರ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ಇಂದು ನಡೆಸಿದೆ. ಸಂಭಾಲ್ ಹಿಂಸಾಚಾರದ ನಂತರ, ಸುಪ್ರೀಂ ಕೋರ್ಟ್‌ನ ಸಿಜೆಐ ಸಂಜೀವ್ ಖನ್ನಾ ಅವರ ಪೀಠ, ಜಾಮಾ ಮಸೀದಿ ಸಮಿತಿಯ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮಸೀದಿಯ ಸರ್ವೇಗೆ ಜಿಲ್ಲಾ ನ್ಯಾಯಾಲಯ ಆದೇಶ ನೀಡಿತ್ತು. ನಂತರ ಅಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com