ಮಹಿಳೆಯೊಂದಿಗೆ ಅನುಚಿತ ವರ್ತನೆ: ನಟ ಶರದ್ ಕಪೂರ್ ವಿರುದ್ಧ ಎಫ್ಐಆರ್ ದಾಖಲು

ಈ ವಾರದ ಆರಂಭದಲ್ಲಿ ಖಾರ್‌ನಲ್ಲಿರುವ ನಟನ ನಿವಾಸದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಶರದ್ ಕಪೂರ್
ಶರದ್ ಕಪೂರ್
Updated on

ಮುಂಬೈ: ಪಶ್ಚಿಮ ಉಪನಗರದಲ್ಲಿರುವ ತನ್ನ ಮನೆಯಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮತ್ತು ಅನುಚಿತವಾಗಿ ಸ್ಪರ್ಶಿಸಿದ ಆರೋಪದ ಮೇಲೆ ಬಾಲಿವುಡ್ ನಟ ಶರದ್ ಕಪೂರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಈ ವಾರದ ಆರಂಭದಲ್ಲಿ ಖಾರ್‌ನಲ್ಲಿರುವ ನಟನ ನಿವಾಸದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

32 ವರ್ಷದ ಮಹಿಳೆ ತನ್ನ ದೂರಿನಲ್ಲಿ, ಶರದ್ ಕಪೂರ್ ಅವರು ಸಿನಿಮಾ ಚಿತ್ರೀಕರಣದ ಬಗ್ಗೆ ಚರ್ಚಿಸುವ ನೆಪದಲ್ಲಿ ನನ್ನನ್ನು ತನ್ನ ಮನೆಗೆ ಕರೆಸಿಕೊಂಡಿದ್ದರು. ಅದರಂತೆ ನಾನು ಅವರ ಮನೆಗೆ ಹೋಗಿದ್ದಾಗ ತನ್ನ ಮಲಗುವ ಕೋಣೆಗೆ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸಿದನು ಮತ್ತು ಬಲವಂತವಾಗಿ ತನ್ನನ್ನು ಮುಟ್ಟಿದರು ಆರೋಪಿಸಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

ಶರದ್ ಕಪೂರ್
'ದಿ ಸಬರಮತಿ ರಿಪೋರ್ಟ್' ಸಿನಿಮಾಗೆ ಒಂದು ವರ್ಷ ರಿಸರ್ಚ್...: ಏಕ್ತಾ ಕಪೂರ್

ಭೇಟಿಯ ನಂತರ ನಟ ಈ ಮಹಿಳೆಗೆ ವಾಟ್ಸಾಪ್‌ನಲ್ಲಿ ಅಸಭ್ಯ ಭಾಷೆ ಬಳಸಿ ಸಂದೇಶ ಕಳುಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ತಾನು ಫೇಸ್‌ಬುಕ್‌ ಮೂಲಕ ನಟನೊಂದಿಗೆ ಸಂಪರ್ಕಕ್ಕೆ ಬಂದಿದ್ದು, ನಂತರ ವಿಡಿಯೋ ಕರೆಗಳ ಮೂಲಕ ಅವರೊಂದಿಗೆ ಸಂವಹನ ನಡೆಸಿದ್ದೇನೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಪೊಲೀಸರು ಕಪೂರ್ ವಿರುದ್ಧ ಕಪೂರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com