ವಾರಣಾಸಿ ರೈಲು ನಿಲ್ದಾಣದಲ್ಲಿ ಭೀಕರ ಅಗ್ನಿ ದುರಂತ: 150ಕ್ಕೂ ಹೆಚ್ಚು ದ್ವಿಚಕ್ರವಾಹನಗಳು 'ಭಸ್ಮ'

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ವಾರಾಣಸಿಯ ಕಂಟೋನ್ಮೆಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
150 two-wheelers gutted in fire at Varanasi
ವಾರಣಾಸಿ ರೈಲು ನಿಲ್ದಾಣದಲ್ಲಿ ಬೆಂಕಿ ದುರಂತ
Updated on

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿ ರೈಲು ನಿಲ್ದಾಣದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಆಕಸ್ಮಕ ಸಂಭವಿಸಿ 150ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಸುಟ್ಟು ಭಸ್ಮವಾಗಿವೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ವಾರಾಣಸಿಯ ಕಂಟೋನ್ಮೆಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ರೈಲ್ವೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ವಿಚಾರ ತಿಳಿದ ಕೂಡಲೇ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್), ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

150 two-wheelers gutted in fire at Varanasi
Jama Masjid Row: ಡಿಸೆಂಬರ್ 10ರವರೆಗೆ ಸಂಭಾಲ್ ಗೆ ಹೊರಗಿನವರಿಗೆ ಪ್ರವೇಶ ನಿಷೇಧ!

ಘಟನೆಯ ಬಗ್ಗೆ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಲಾಲ್ಜಿ ಚೌಧರಿ ವಿಷಾದ ವ್ಯಕ್ತಪಡಿಸಿದ್ದಾರೆ. ರೈಲ್ವೆ ನೌಕರರಿಗಾಗಿ ಪಾರ್ಕಿಂಗ್ ಸ್ಟ್ಯಾಂಡ್(ವಾಹನ ನಿಲುಗಡೆ) ನಿರ್ಮಿಸಲಾಗಿತ್ತು. ಅಗ್ನಿ ಅವಘಡದಿಂದ ಸಾಕಷ್ಟು ಹಾನಿಯಾಗಿದೆ ಎಂದು ಹೇಳಿದ್ದಾರೆ.

ರೈಲ್ವೇ ಸಿಬ್ಬಂದಿಗಾಗಿಯೇ ಮೀಸಲಿರಿಸಲಾಗಿದ್ದ ಪಾರ್ಕಿಂಗ್ ಜಾಗ ಇದಾಗಿದ್ದು, ಇಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com