Pornography case: 'ನನ್ನ ಪತ್ನಿ ಹೆಸರು ಎಳೆದು ತರಬೇಡಿ'; ಮಾಧ್ಯಮಗಳ ವಿರುದ್ಧ Raj Kundra ಕಿಡಿ

ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಹಾಗೂ ಆಫೀಸ್​​ಗಳ ಮೇಲೆ ನಿನ್ನೆ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಈ ಹಿಂದೆ ರಾಜ್ ಕುಂದ್ರಾ ಬಂಧನಕ್ಕೀಡಾಗಿದ್ದರು.
Raj Kundra
ಉದ್ಯಮಿ ರಾಜ್ ಕುಂದ್ರಾ
Updated on

ಮುಂಬೈ: ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದು, ಅನಗತ್ಯವಾಗಿ ನನ್ನ ಪತ್ನಿ ಹೆಸರು ಎಳೆದುತರಬೇಡಿ ಎಂದು ಆಗ್ರಹಿಸಿದ್ದಾರೆ.

ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಹಾಗೂ ಆಫೀಸ್​​ಗಳ ಮೇಲೆ ನಿನ್ನೆ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಈ ಹಿಂದೆ ರಾಜ್ ಕುಂದ್ರಾ ಬಂಧನಕ್ಕೀಡಾಗಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ರಾಜ್ ಕುಂದ್ರಾ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಈ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು.

Raj Kundra
Porn Content Case: Shilpa Shetty ಪತಿ ರಾಜ್ ಕುಂದ್ರಾ ಮನೆ ಮೇಲೆ ED ಅಧಿಕಾರಿಗಳ ದಾಳಿ

ಇದೀಗ ಇದೇ ವಿಚಾರವಾಗಿ ಮಾಧ್ಯಮಗಳ ವಿರುದ್ಧ ರಾಜ್ ಕುಂದ್ರಾ ಆಕ್ರೋಶ ವ್ಯಕ್ತಪಡಿಸಿದ್ದು, ಅನಗತ್ಯವಾಗಿ ನನ್ನ ಪತ್ನಿ ಹೆಸರನ್ನು ಮಾಧ್ಯಮಗಳು ಎಳೆದು ತರುತ್ತಿವೆ. ಶಿಲ್ಪಾ ಶೆಟ್ಟಿ ಅವರ ಹೆಸರನ್ನು ಈ ಪ್ರಕರಣದಿಂದ ದೂರವಿಡಿ. ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಅವರ ಹೆಸರನ್ನು ಎಳೆದು ತರಲಾಗುತ್ತಿರುವುದು ತಮಗೆ ಬೇಸರ ತಂದಿದೆ ಎಂದು ಹೇಳಿದ್ದಾರೆ.

ತಮ್ಮ ವಿರುದ್ಧ ಬಂದಿರುವ ಆರೋಪ ಸುಳ್ಳು ಎಂಬುದು ಮುಂದೊಂದು ದಿನ ಸಾಬೀತಾಗುತ್ತದೆ. ಇದು ಯಾರಿಗೆಲ್ಲ ಸಂಬಂಧಿಸಿದೆಯೋ ಅವರಿಗೆ ನೇರವಾಗಿ ಹೇಳುತ್ತಿದ್ದೇನೆ. ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ತನಿಖೆಗೆ ನಾನು ಸಹಕರಿಸುತ್ತಿದ್ದೇನೆ.

ಹಣ ವರ್ಗಾವಣೆ, ಅಶ್ಲೀಲ ಸಿನಿಮಾ ನಿರ್ಮಾಣ ಮತ್ತಿತ್ಯಾದಿ ಪ್ರಕರಣಗಳನ್ನು ಇದು ಒಳಗೊಂಡಿದೆ. ಯಾವುದನ್ನು ಸೆನ್ಸೇಷನ್ ಮಾಡಿದರೂ ಸತ್ಯ ಮರೆ ಆಗುವುದಿಲ್ಲ. ಕೊನೆಯಲ್ಲಿ ಸತ್ಯ ಹೊರಬರಲೇಬೇಕು. ಸಂಬಂಧಿಸದೇ ಇಲ್ಲದ ವಿಚಾರಗಳಲ್ಲಿ ನನ್ನ ಪತ್ನಿಯ ಹೆಸರನ್ನು ಎಳೆದು ತರಬೇಡಿ ಎಂದು ರಾಜ್ ಕುಂದ್ರಾ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com