ನವದೆಹಲಿ: ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯವನ್ನು ನಿಲ್ಲಿಸಬೇಕು ಹಾಗೂ ಇಸ್ಕಾನ್ ಸನ್ಯಾಸಿ ಚಿನ್ಮಯಿ ಕೃಷ್ಣದಾಸ್ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಅಲ್ಲಿನ ಮಧ್ಯಂತರ ಸರ್ಕಾರವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಒತ್ತಾಯಿಸಿದೆ.
ಬಾಂಗ್ಲಾದೇಶದಲ್ಲಿನ ಹಿಂದೂಗಳು ಮತ್ತಿತರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಗೆ ಕೇಂದ್ರ ಸರ್ಕಾರ ತನ್ನ ಪ್ರಯತ್ನಗಳನ್ನು ಮುಂದುವರೆಸಬೇಕು. ಆದಷ್ಟು ಬೇಗ ಈ ಕುರಿತು ಜಾಗತಿಕ ಅಭಿಪ್ರಾಯ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮನವಿ ಮಾಡಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದೂಗಳು, ಮಹಿಳೆಯರು ಸೇರಿದಂತೆ ಇತರ ಅಲ್ಪಸಂಖ್ಯಾತರ ಮೇಲಿನ ಇಸ್ಲಾಮಿಕ್ ಮೂಲಭೂತವಾದಿಗಳು ನಡೆಸುತ್ತಿರುವ ದಾಳಿಗಳು, ಕೊಲೆ, ಲೂಟಿ, ಅಮಾನವೀಯ ದೌರ್ಜನ್ಯಗಳು ಅತ್ಯಂತ ಕಳವಳಕಾರಿಯಾಗಿದ್ದು, ಇದನ್ನು ಆರ್ ಎಸ್ ಎಸ್ ಖಂಡಿಸುತ್ತದೆ. ಇದನ್ನು ನಿಲ್ಲಿಸುವ ಬದಲು ಬಾಂಗ್ಲಾದೇಶದಲ್ಲಿನ ಮಧ್ಯಂತರ ಸರ್ಕಾರ ಮತ್ತಿತರ ಏಜೆನ್ಸಿಗಳು ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
Advertisement