ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ, ಶೀಘ್ರಗತಿ ಗುಣಮುಖರಾಗುವಂತೆ ಪ್ರಾರ್ಥನೆ
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದು, ಈ ಬೆಳವಣಿಗೆ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.
ರಜನಿಕಾಂತ್ ಅವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಸೋಮವಾರ ತಡರಾತ್ರಿ ಚೆನ್ನೈನ ಆಯರ್ವಿಳಕ್ಕು ಪ್ರದೇಶದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ರಜನಿಕಾಂತ್ಗೆ ಕಾರ್ಡಿಯಾಕ್ ಕ್ಯಾಥ್ ಕ್ಯಾಬ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗುತ್ತಿದ್ದು, ತಮ್ಮ ನೆಚ್ಚಿನ ನಟ ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಇನ್ನು ರಜನಿಕಾಂತ್ ಅವರ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆ ಅಥವಾ ರಜನಿಕಾಂತ್ ಅವರ ಕುಟುಂಬದವರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಇಂದು ಬೆಳಗ್ಗೆ ರಜನಿಕಾಂತ್ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ.
ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್ ಮುಂಬರುವ ವೆಟ್ಟೈಯನ್ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು.
ಇದು ಆ್ಯಕ್ಷನ್ ಪ್ಯಾಕ್ಡ್ ಮನರಂಜನೆಯ ಸಿನಿಮಾವಾಗಿದ್ದು, ಅಕ್ಟೋಬರ್ 10ರಂದು ಥಿಯೇಟರ್ಗಳಿಗೆ ಬರಲಿದೆ. ಈ ಸಿನಿಮಾವನ್ನು ಟಿಜೆ ಜ್ಞಾನವೇಲ್ ನಿರ್ದೇಶಿಸಿದ್ದಾರೆ