

ನವದೆಹಲಿ: ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಹಾಗೂ ಹಲವು ಲಡಾಖ್ ನ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ವಾಂಗ್ಚುಕ್ ಅವರನ್ನು ವಶಕ್ಕೆ ಪಡೆದಿರುವುದು ಸ್ವೀಕಾರಾರ್ಹವಲ್ಲ, ಪ್ರಧಾನಿ ನರೇಂದ್ರ ಮೋದಿ ಲಡಾಖ್ ನ ಜನತೆಯ ಧ್ವನಿಯನ್ನು ಕೇಳಬೇಕು ಎಂದು ಹೇಳಿದ್ದಾರೆ.
"ಮೋದಿ ಸರ್ಕಾರದ ದುರಹಂಕಾರ", ಅಧಿಕಾರವನ್ನು ಬಳಸಿ, ಲಡಾಖ್‌ನಿಂದ ದೆಹಲಿಗೆ ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತಿದ್ದ ನಾಗರಿಕರ ಗುಂಪನ್ನು ಬಂಧಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶಕ್ಕೆ ಆರನೇ ಶೆಡ್ಯೂಲ್ ಸ್ಥಾನಮಾನ ನೀಡುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಗೆ ಮೆರವಣಿಗೆ ನಡೆಸಿದ ವಾಂಗ್‌ಚುಕ್ ಸೇರಿದಂತೆ ಲಡಾಖ್‌ನ ಸುಮಾರು 120 ಜನರನ್ನು ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಬಂಧಿಸಿದ್ದಾರೆ. ಇದು ಹೇಡಿತನದ ಕ್ರಮವಲ್ಲದೆ ಮತ್ತೇನೂ ಅಲ್ಲ ಮತ್ತು ಇದು ಪ್ರಜಾಪ್ರಭುತ್ವವಲ್ಲ ಎಂದು ಖರ್ಗೆ ಹೇಳಿದರು.
ಲಡಾಖ್‌ನಲ್ಲಿ, ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಬುಡಕಟ್ಟು ಸಮುದಾಯಗಳನ್ನು ರಕ್ಷಿಸಲು ವ್ಯಾಪಕವಾದ ಕರೆಗಳೊಂದಿಗೆ ಸಾರ್ವಜನಿಕ ಬೆಂಬಲದ ಅಲೆ ಬೆಳೆಯುತ್ತಿದೆ ಎಂದು ಖರ್ಗೆ ಹೇಳಿದರು.
Advertisement