ಜೈಪುರ: ರಾಜಸ್ಥಾನ ಮತ್ತು ಮಧ್ಯಪ್ರದೇಶದ ಹಲವಾರು ರೈಲ್ವೆ ನಿಲ್ದಾಣಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಪತ್ರವೊಂದು ಹನುಮಾನ್‌ಗಢ ರೈಲು ನಿಲ್ದಾಣಕ್ಕೆ ಬಂದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಈ ಪತ್ರವನ್ನು ಹನುಮಾನ್‌ಗಢ ರೈಲ್ವೆ ಸ್ಟೆಷನ್ ಮಾಸ್ಟರ್ ಗೆ ಅಂಚೆ ಮೂಲಕ ಕಳುಹಿಸಲಾಗಿದ್ದು, ಮಂಗಳವಾರ ಸಂಜೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಹನುಮಾನ್‌ಗಢದ ಹೆಚ್ಚುವರಿ ಎಸ್‌ಪಿ, ಪ್ಯಾರೆ ಲಾಲ್ ಮೀನಾ ಅವರು ಹೇಳಿದ್ದಾರೆ.
ಗಂಗಾನಗರ, ಹನುಮಾನ್‌ಗಢ, ಜೋಧ್‌ಪುರ, ಬಿಕಾನೇರ್, ಕೋಟಾ, ಬುಂಡಿ, ಉದಯಪುರ, ಜೈಪುರದ ರೈಲ್ವೆ ನಿಲ್ದಾಣ ಮತ್ತು ಇತರ ಸ್ಥಳಗಳಲ್ಲಿ ಅಕ್ಟೋಬರ್‌ನಲ್ಲಿ ಬಾಂಬ್ ಸ್ಫೋಟಿಸಲಾಗುವುದು ಎಂದು ಜೈಷ್-ಎ-ಮೊಹಮ್ಮದ್ ಹೆಸರಿನಲ್ಲಿದ್ದ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನವೆಂಬರ್ 2 ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶದ ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿತ್ತು. ಜೈಶ್-ಎ-ಮೊಹಮ್ಮದ್ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾಗಿದೆ.
ಸರ್ಕಾರಿ ರೈಲ್ವೆ ಪೊಲೀಸ್(ಜಿಆರ್‌ಪಿ), ಸ್ಥಳೀಯ ಪೊಲೀಸರು ಮತ್ತು ಬಿಎಸ್‌ಎಫ್ ಸಿಬ್ಬಂದಿ ರೈಲು ನಿಲ್ದಾಣ ಮತ್ತು ಇತರ ಸ್ಥಳಗಳಲ್ಲಿ ತೀವ್ರ ಶೋಧ ನಡೆಸಿದ್ದಾರೆ ಎಂದು ಮೀನಾ ಹೇಳಿದ್ದಾರೆ.
Advertisement