ನವದೆಹಲಿ: ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಹಿಂದೆಂದೂ ಕಂಡರಿಯದ ಅತಿ ದೊಡ್ಡ ಮಾದಕ ದ್ರವ್ಯ ದಂಧೆ ಭೇದಿಸಿದ್ದು, ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ 560 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ಪೊಲೀಸ್ ವಿಶೇಷ ಘಟಕದ ತಂಡ, ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ನಾಲ್ವರನ್ನು ಬಂಧಿಸಿದ್ದು, ಅವರಿಂದ 565 ಕಿಲೋಗ್ರಾಂ ಕೊಕೋನ್ ವಶಪಡಿಸಿಕೊಂಡಿದೆ.
ಬಂಧಿತರು ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಕೊಕೇನ್ ಮಾರಾಟ ಮಾಡಲು ಯೋಜಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಶೇಷ ಘಟಕದ ತಂಡವು, ಖಚಿತ ಮಾಹಿತಿ ಆಧರಿಸಿ ಎರಡು ತಿಂಗಳಿನಿಂದ ಕೆಲಸ ಮಾಡುತ್ತಿತ್ತು. ಇದೀಗ ಹಬ್ಬದ ಋತುವಿನಲ್ಲಿ ಪ್ರಕರಣವನ್ನು ಭೇದಿಸಲಾಗಿದೆ. ಬಂಧಿತ
ನಾಲ್ವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement