ಬೆಂಗಳೂರು: ಜಾತಿ ನಿಂದನೆ, ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರ ಮನೆ ಮೇಲೆ ದಾಳಿ ನಡೆಸಿದ್ದ ಎಸ್ಐಟಿ ಅಧಿಕಾರಿಗಳು ಲ್ಯಾಪ್‌ಟಾಪ್ ಮತ್ತು ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಂಡಿದ್ದರು. ಇದರಲ್ಲಿ ಹಲವು ಖಾಸಗಿ ವಿಡಿಯೋಗಳು ಪತ್ತೆಯಾಗಿದ್ದು ಬಿಜೆಪಿ ಸೇರಿದಂತೆ ಕೆಲ ರಾಜಕೀಯ ನಾಯಕರ ಖಾಸಗಿ ಕ್ಷಣದ ವಿಡಿಯೋಗಳು ಇವೆ ಎಂದು ಪೊಲೀಸ್ ಉನ್ನತ ಮೂಲಗಳು ಹೇಳಿವೆ.
ಸೆಪ್ಟೆಂಬರ್ 28ರಂದು ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರ ನಿವಾಸ, ಕಚೇರಿ ಸೇರಿದಂತೆ 12ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿದ್ದರು. ವೈಯಾಲಿ ಕಾವಲ್‌ನಲ್ಲಿರುವ ಮುನಿರತ್ನರ ಮನೆಯಲ್ಲಿ ಶೋಧ ಕಾರ್ಯಾಚರಣೆ ವೇಳೆ ಸಿಕ್ಕ ಲ್ಯಾಪ್‌ಟಾಪ್ ಮತ್ತು ಪೆನ್‌ಡ್ರೈವ್‌ಗಳಲ್ಲಿ ಕೆಲ ರಾಜಕೀಯ ನಾಯಕರ ಹಾಗೂ ಸರ್ಕಾರಿ ಅಧಿಕಾರಿಗಳ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ. ಮಹಿಳೆಯರ ಅಶ್ಲೀಲ ದೃಶ್ಯಗಳು ವಿಡಿಯೋದಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಈ ವಿಡಿಯೊಗಳನ್ನು ಹನಿಟ್ರ್ಯಾಪ್ ಮೂಲಕ ಚಿತ್ರೀಕರಿಸಿಕೊಂಡಿರುವ ಶಂಕೆಯಿದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ದುರುದ್ದೇಶಪೂರ್ವಕವಾಗಿಯೇ ಈ ವಿಡಿಯೋಗಳನ್ನು ಇರಿಸಿಕೊಳ್ಳಲಾಗಿದೆ. ಹೀಗಾಗಿ ಈ ವಿಡಿಯೋಗಳ ಅಸಲಿಯತ್ತು ಪರೀಕ್ಷೆಗಾಗಿ ಪೆನ್‌ಡ್ರೈವ್ ಹಾಗೂ ಲ್ಯಾಪ್‌ಟಾಪ್ ಗಳನ್ನು ಎಫ್ಎಸ್‌ಎಲ್‌ಗೆ ಕಳುಹಿಸಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
Advertisement