
ಭುಜ್: ತೀರ್ಥಯಾತ್ರೆ ಮುಗಿಸಿ ಹಿಂದಿರುಗುತ್ತಿದ್ದ ಯಾತ್ರಾರ್ಥಿಗಳಿದ್ದ ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಬಾಲಕನೊಬ್ಬ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಗುಜರಾತ್ ಜಿಲ್ಲೆಯ ಕಚ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಆಶಾಪುರ ಮಾತಾ ದೇವಸ್ಥಾನದಿಂದ ಹಿಂದಿರುಗುತ್ತಿದ್ದ ಯಾತ್ರಾರ್ಥಿಗಳಿದ್ದ ಟ್ರ್ಯಾಕ್ಟರ್‌ಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಹೀಗಾಗಿ ಇಬ್ಬರು ಮಹಿಳೆಯರು ಮತ್ತು ಒಂಬತ್ತು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಗಾಯಗೊಂಡ 11 ಜನರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಸಮಖಿಯಾಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತಪಟ್ಟವರೆಲ್ಲರೂ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇವರು ಮೊರ್ಬಿ ಜಿಲ್ಲೆಯ ಖಖ್ರೆಚಿ ಗ್ರಾಮಕ್ಕೆ ಸೇರಿದವರಾಗಿದ್ದು, ಅಪಘಾತ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.
Advertisement