ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಪೈಲಟ್ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ದೆಹಲಿ ಮೂಲದ ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಹೊರಟು ಮುಂಬೈನ ಜುಹುಗೆ ತೆರಳುತ್ತಿತ್ತು. ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.
ಈ ವೇಳೆ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್‌ಗೆ ಸಮೀಪವಿರುವ ಬವ್‌ಧಾನ್ ಪ್ರದೇಶದ ಗುಡ್ಡಗಾಡು ಪ್ರದೇಶದ ಬಳಿ ಬೆಳಿಗ್ಗೆ 6.45 ಕ್ಕೆ ಪತನಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಪೈಲಟ್‌ಗಳಾದ ಪರಂಜೀತ್ ಸಿಂಗ್, ಜಿ.ಕೆ. ಪಿಳ್ಳೈ ಹಾಗೂ ಎಂಜಿನಿಯರ್ ಪ್ರೀತಂ ಭಾರದ್ವಾಜ್ ಎಂದು ಗುರುತಿಸಲಾಗಿದೆ.
ಅಪಘಾತದ ನಂತರ ಹೆಲಿಕಾಪ್ಟರ್'ಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement