ದೇಶ

ಫೇಸ್‌ಬುಕ್ ಗೆಳೆಯನಿಂದ ವಂಚನೆ; 18 ಲಕ್ಷ ರೂ. ಕಳೆದುಕೊಂಡ ಮಹಿಳೆ!

2023 ರ ಜನವರಿಯಲ್ಲಿ ಫೇಸ್‌ಬುಕ್‌ನಲ್ಲಿ ತನ್ನನ್ನು `ವಿವೇಕ್ ಪಾಟೀಲ್' ಎಂದು ಗುರುತಿಸಿಕೊಂಡಿದ್ದ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿ ಇದ್ದುದ್ದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಫೇಸ್‌ಬುಕ್ ಗೆಳೆಯನಿಂದ ವಂಚನೆ; 18 ಲಕ್ಷ ರೂ. ಕಳೆದುಕೊಂಡ ಮಹಿಳೆ!
ಸಾಂದರ್ಭಿಕ ಚಿತ್ರ
Published On :

ಮುಂಬೈ: ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿದ ವಂಚಕನೊಬ್ಬ 29 ವರ್ಷದ ಮಹಿಳೆಗೆ 18 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಮುಂಬೈಯಲ್ಲಿ ನಡೆದಿದೆ. ಈ ಸಂಬಂಧ ಅಂಧೇರಿ ಪಶ್ಚಿಮದ ವರ್ಸೋವಾ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೂಲತ: ರತ್ನಗಿರಿ ಜಿಲ್ಲೆಯ ಮಹಿಳೆ ಇಲ್ಲಿ ಕೇರ್‌ಟೇಕರ್ ಆಗಿ ಕೆಲಸ ಮಾಡುತ್ತಿರುವುದಾಗಿ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

2023 ರ ಜನವರಿಯಲ್ಲಿ ಫೇಸ್‌ಬುಕ್‌ನಲ್ಲಿ ತನ್ನನ್ನು `ವಿವೇಕ್ ಪಾಟೀಲ್' ಎಂದು ಗುರುತಿಸಿಕೊಂಡಿದ್ದ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿ ಇದ್ದುದ್ದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಆಕೆಯೊಂದಿಗೆ ಹೇಳಿಕೊಂಡಿದ್ದ ವಂಚಕ, ನಿಯಮಿತವಾಗಿ ಚಾಟ್ ಮಾಡಲು ಪ್ರಾರಂಭಿಸಿದ ನಂತರ, ಅನಾರೋಗ್ಯದ ನೆಪ ಹೇಳಿ ಸಾಲವಾಗಿ ನೀಡುವಂತೆ ಕೇಳಿದ್ದಾನೆ. ಆತ ನೀಡಿದ UPI ವಿಳಾಸಕ್ಕೆ ಹಣ ವರ್ಗಾವಣೆ ಮಾಡಿರುವುದಾಗಿ ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾರೆ.

ಬಳಿಕ ಹಲವು ಬಾರಿ ಹಣ ಕೇಳಿದ್ದು, ವಿವಿಧ ಖಾತೆಗಳಿಗೆ ಒಟ್ಟು 18,30,101 ರೂ. ಹಣವನ್ನು ಸಂತ್ರಸ್ತೆ ಕಳುಹಿಸಿದ್ದಾರೆ. ಆದರೆ ವಂಚಕ ಸ್ವಲ್ಪ ದಿನಗಳ ಬಳಿಕ ಮಹಿಳೆಯ ಕರೆ ಮತ್ತು ಸಂದೇಶಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದಾಗ ಮೋಸ ಹೋಗಿರುವುದು ಆಕೆಗೆ ಮನವರಿಕೆಯಾಗಿದೆ. ಈ ಸಂಬಂಧ ಹಣ ವರ್ಗಾವಣೆಗಾಗಿ ಬಳಸಿಕೊಳ್ಳಲಾದ UPI ವಿಳಾಸಗಳಿದ್ದ ವಿವೇಕ್ ಪಾಟೀಲ್ ಮತ್ತು ಒಬ್ಬ ಲಕ್ಷ್ಮಣ್ ದಳವಿ ಎಂಬ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.