ಬೈಕ್‌ಗಳಿಗೆ ಡಂಪರ್ ಡಿಕ್ಕಿ: ಸ್ಥಳದಲ್ಲೇ ಐವರು ಬೈಕ್ ಸವಾರರ ದಾರುಣ ಸಾವು

ಬ್ರೇಕ್ ವಿಫಲವಾದ ನಂತರ ಡಂಪರ್ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಿಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದೆ ಎಂದು ಲಾಲ್ಸೋಟ್ ಪೊಲೀಸ್ ಠಾಣೆಯ ಉಸ್ತುವಾರಿ ಮಹಾವೀರ್ ಸಿಂಗ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರPTI
Updated on

ರಾಜಸ್ಥಾನದ ದೌಸಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ದಾರುಣ ಸಾವನ್ನಪ್ಪಿದ್ದಾರೆ. ಮೂರು ಬೈಕ್‌ಗಳಿಗೆ ಡಂಪರ್ ಡಿಕ್ಕಿ ಹೊಡೆದಿದ್ದು, ಐದು ಜನರು ಸಾವನ್ನಪ್ಪಿದ್ದು 10 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ಸಂಸ್ಥೆಯ ವರದಿಯ ಪ್ರಕಾರ, ಬ್ರೇಕ್ ವಿಫಲವಾದ ನಂತರ ಡಂಪರ್ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಿಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದೆ ಎಂದು ಲಾಲ್ಸೋಟ್ ಪೊಲೀಸ್ ಠಾಣೆಯ ಉಸ್ತುವಾರಿ ಮಹಾವೀರ್ ಸಿಂಗ್ ಹೇಳಿದ್ದಾರೆ.

ಮೃತ ಐವರಲ್ಲಿ ನಾಲ್ವರನ್ನು ಲಕ್ಷ್ಮಿ ಮಹಾವಾರ್ (7), ಮಹೇಶ್ ಚಂದ್ರ ಶರ್ಮಾ (45), ರಾಮ್ ಹರಿ ಯೋಗಿ (42) ಮತ್ತು ರೆವದ್ ಮಾಲ್ ಮಹಾವರ್ (40) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.

ಸಂಗ್ರಹ ಚಿತ್ರ
ಉತ್ತರಾಖಂಡ್: ಮದುವೆ ದಿಬ್ಬಣದ ಬಸ್ 200 ಅಡಿ ಆಳದ ಕಂದಕಕ್ಕೆ ಬಿದ್ದು ಅಪಘಾತ; 30 ಮಂದಿ ದಾರುಣ ಸಾವು

ಘಟನೆಗೆ ಸಂಬಂಧಿಸಿದಂತೆ, ರಾಜಸ್ಥಾನದ ರಾಜ್ಯಪಾಲ ಹರಿಭಾವು ಬಾಗ್ಡೆ ಮತ್ತು ಮುಖ್ಯಮಂತ್ರಿ ಭಜನಲಾಲ್ ಶರ್ಮಾ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com