
ಘಾಜಿಯಾಬಾದ್: ವಿವಾದಿತ ಅರ್ಚಕ ಯತಿ ನರಸಿಂಗಾನಂದರ ಆಪ್ತರು ನೀಡಿದ ದೂರಿನ ಮೇರೆಗೆ ಆಲ್ಟ್-ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ ಸೋಮವಾರ ಘಾಜಿಯಾಬಾದ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಯತಿ ನರಸಿಮಹಾನಂದ ಸರಸ್ವತಿ ಫೌಂಡೇಶನ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರು ಕವಿನಗರ ಪೊಲೀಸರಿಗೆ ಮೊಹಮ್ಮದ್ ಜುಬೇರ್ ವಿರುದ್ಧ ದೂರು ನೀಡಿದ್ದು, ಮುಸ್ಲಿಮರಿಂದ ಹಿಂಸಾಚಾರಕ್ಕೆ ಪ್ರಚೋದನೆ ನೀಡಲು ಅಕ್ಟೋಬರ್ 3 ರಂದು ಜುಬೇರ್ ಅವರು ನರಸಿಂಹಾನಂದ್ ಅವರ ಹಳೆಯ ಕಾರ್ಯಕ್ರಮದ ವಿಡಿಯೋ ಕ್ಲಿಪ್ಪಿಂಗ್ ಅನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸೆಕ್ಷನ್ 196(ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು..) ಸೆಕ್ಷನ್ 228 (ಸುಳ್ಳು ಪುರಾವೆಗಳನ್ನು ನೀಡುವುದು ಅಥವಾ ಸೃಷ್ಟಿಸುವುದು), ಸೆಕ್ಷನ್ 299(ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಜುಬೇರ್ ವಿರುದ್ಧ ಇಂದು ಮಧ್ಯಾಹ್ನ 2 ಗಂಟೆ ಎಫ್‌ಐಆರ್ ದಾಖಲಿಸಲಾಗಿದೆ.
ನರಸಿಂಹಾನಂದ ಅವರು ಪ್ರವಾದಿ ಮುಹಮ್ಮದ್ ವಿರುದ್ಧದ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ನರಸಿಂಹಾನಂದ ನೇತೃತ್ವದ ಗಾಜಿಯಾಬಾದ್‌ನ ದಾಸ್ನಾ ದೇವಿ ದೇವಸ್ಥಾನದ ಹೊರಗೆ ಶುಕ್ರವಾರ ರಾತ್ರಿ ಯತಿ ವಿರುದ್ಧ ಪ್ರತಿಭಟನೆ ನಡೆಸಲು ದೊಡ್ಡ ಗುಂಪು ಜಮಾಯಿಸಿತ್ತು. ಅವರ ಪ್ರಚೋದನಕಾರಿ ಹೇಳಿಕೆಗಳ ವಿಡಿಯೋಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ, ದೇವಸ್ಥಾನದ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ.
Advertisement