
ಮುಂಬೈ: ಹಿರಿಯ ಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ (Ratan Tata) ತಮ್ಮ ಆರೋಗ್ಯದ ಕುರಿತ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ವಯೋ ಸಹಜ ಕಾರಣಗಳಿಂದಾಗಿ ಆರೋಗ್ಯ ತಪಾಸಣೆಗೆ ಒಳಗಾಗಿದ್ದೆ, ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಮುಂಬೈ ನ ಆಸ್ಪತ್ರೆಗೆ ರತನ್ ಟಾಟ ದಾಖಲಾಗಿದ್ದಾರೆ ಎಂಬ ವರದಿಗಳನ್ನು ಊಹಾಪೋಹ ಎಂದು 86 ವರ್ಷದ ರತನ್ ಟಾಟ ತಮ್ಮ ಸಾಮಾಜಿಕ ಜಾಲತಾಣ ಖಾತೆ ಮೂಲಕ ಸ್ಪಷ್ಟನೆ ನೀಡಿದ್ದಾರೆ. "ನನ್ನ ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಂದಾಗಿ ನಾನು ಪ್ರಸ್ತುತ ತಪಾಸಣೆಗೆ ಒಳಗಾಗುತ್ತಿದ್ದೇನೆ" ಎಂದು ಅವರು ಹೇಳಿದ್ದಾರೆ.
"ಆತಂಕಕ್ಕೆ ಯಾವುದೇ ಕಾರಣವಿಲ್ಲ. ನಾನು ಉತ್ತಮ ಉತ್ಸಾಹದಲ್ಲಿ ಇರುತ್ತೇನೆ" ಎಂದು ಅವರು ಹೇಳಿದ್ದು, "ತಪ್ಪು ಮಾಹಿತಿ ಹರಡುವುದನ್ನು" ತಡೆಯಲು ಸಾರ್ವಜನಿಕರಿಗೆ ಮತ್ತು ಮಾಧ್ಯಮಗಳಿಗೆ ವಿನಂತಿಸಿದ್ದಾರೆ.
Advertisement