ಹರಿಯಾಣ ಚುನಾವಣೆ ಫಲಿತಾಂಶ: ವಿಜೇತ ಅಭ್ಯರ್ಥಿಗಳ ಸಭೆ ಕರೆದ ಕಾಂಗ್ರೆಸ್

ನಾಳೆ ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರ ಸಭೆಗೆ ಕರೆದಿರುವುದಾಗಿ ಪಕ್ಷದ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹೇಳಿದ್ದಾರೆ.
ರಣದೀಪ್ ಸಿಂಗ್ ಸುರ್ಜೇವಾಲಾ
ರಣದೀಪ್ ಸಿಂಗ್ ಸುರ್ಜೇವಾಲಾ
Updated on

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.

ಇದರ ಬೆನ್ನಲ್ಲೇ ನಾಳೆ ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರ ಸಭೆಗೆ ಕರೆದಿರುವುದಾಗಿ ಪಕ್ಷದ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹೇಳಿದ್ದಾರೆ.

ಸುರ್ಜೆವಾಲಾ ಹರಿಯಾಣದ ಕೈತಾಲ್ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅವರ ಪುತ್ರ ಆದಿತ್ಯ ಸುರ್ಜೆವಾಲಾ ಅವರು ಬಿಜೆಪಿಯ ಲೀಲಾ ರಾಮ್ ಅವರ ವಿರುದ್ಧ 8,124 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ರಣದೀಪ್ ಸಿಂಗ್ ಸುರ್ಜೇವಾಲಾ
ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ ಬೆನ್ನಲ್ಲೇ ರಾಹುಲ್ ಗಾಂಧಿಯ ಜಿಲೇಬಿ ಹೇಳಿಕೆ ಸಿಕ್ಕಾಪಟ್ಟೆ ಟ್ರೋಲ್!

"ಕಾಂಗ್ರೆಸ್ ನಾಳೆ ಪಕ್ಷದ ಶಾಸಕರ ಸಭೆಗೆ ಕರೆದಿದೆ. ಕೆಲವು ವಿಷಯಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷರು ಮತ್ತು ಹಿರಿಯ ನಾಯಕತ್ವ ಇಂದು ನನಗೆ ಕರೆ ಮಾಡಿತ್ತು" ಎಂದು ಸುರ್ಜೇವಾಲಾ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com