ಜಮ್ಮು-ಕಾಶ್ಮೀರ: ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹ ಪತ್ತೆ!

ಅನಂತನಾಗ್‌ನ ಅರಣ್ಯ ಪ್ರದೇಶದಿಂದ ಇಬ್ಬರು ಟಿಎ ಸೈನಿಕರನ್ನು ಅಪಹರಿಸಲಾಗಿತ್ತು. ಈ ಅಪಹರಣ ಸಂದರ್ಭದಲ್ಲಿ ಓರ್ವ ಯೋಧ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಯೋಧರು
ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಯೋಧರು
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ನಾಪತ್ತೆಯಾಗಿದ್ದ ಯೋಧನ ಮೃತದೇಹವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿವೆ.

ಟೆರಿಟೋರಿಯಲ್ ಆರ್ಮಿ ಜವಾನ್ ಹಿಲಾಲ್ ಅಹ್ಮದ್ ಭಟ್ ಅವರ ಮೃತದೇಹವನ್ನು ಅನಂತನಾಗ್‌ನ ಉತ್ರಾಸೂ ಪ್ರದೇಶದ ಸಾಂಗ್ಲಾನ್ ಅರಣ್ಯ ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ. ದಕ್ಷಿಣ ಕಾಶ್ಮೀರದ ಕೋಕರ್‌ನಾಗ್ ಅರಣ್ಯದಲ್ಲಿ ರಾತ್ರೋರಾತ್ರಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ 26 ವರ್ಷದ ಪ್ರಾದೇಶಿಕ ಸೇನಾ ಸಿಬ್ಬಂದಿಯನ್ನು ಅಪಹರಿಸಿದ್ದರು ಎಂದು ಸೇನೆ ಬುಧವಾರ ದೃಢಪಡಿಸಿದೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅಕ್ಟೋಬರ್ 8 ರಂದು ಕಜ್ವಾನ್ ಅರಣ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಇತರ ಏಜೆನ್ಸಿಗಳೊಂದಿಗೆ ಭಾರತೀಯ ಸೇನೆಯು ಜಂಟಿ ಪ್ರತಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಟೆರಿಟೋರಿಯಲ್ ಆರ್ಮಿಯ ಒಬ್ಬ ಯೋಧ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದ್ದರಿಂದ ಕಾರ್ಯಾಚರಣೆಯು ರಾತ್ರಿಯಿಡೀ ಮುಂದುವರೆಯಿತು" ಎಂದು ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಯೋಧರು
ಜಮ್ಮು ಮತ್ತು ಕಾಶ್ಮೀರ: ಸೇನೆ-ಪೊಲೀಸ್ ಜಂಟಿ ಕಾರ್ಯಾಚರಣೆ; ಮೂರು ಉಗ್ರರು ಹತ

"ಬೃಹತ್ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿಸಿದೆ. ಅಪಹರಣಕ್ಕೊಳಗಾದ ವ್ಯಕ್ತಿ ಅನಂತನಾಗ್ ಜಿಲ್ಲೆಯ ನಿವಾಸಿ ಎಂದು ಭದ್ರತಾ ಸಂಸ್ಥೆಯ ಮೂಲಗಳು ಬಹಿರಂಗಪಡಿಸಿವೆ.

ಅನಂತನಾಗ್‌ನ ಅರಣ್ಯ ಪ್ರದೇಶದಿಂದ ಇಬ್ಬರು ಟಿಎ ಸೈನಿಕರನ್ನು ಅಪಹರಿಸಲಾಗಿತ್ತು. ಈ ಅಪಹರಣ ಸಂದರ್ಭದಲ್ಲಿ ಓರ್ವ ಯೋಧ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಪಹರಣಕ್ಕೆ ಒಳಗಾಗಿರುವ ಮತ್ತೊಬ್ಬ ಯೋಧನ ಶವಪತ್ತೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com