
ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ (NC) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಶುಕ್ರವಾರ ಸಂಜೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿ ಮಾಡಿದ್ದು, ಜಮ್ಮು -ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ NC ಗೆ ಬೆಂಬಲ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ.
ಲೆಫ್ಟಿನೆಂಟ್ ಗವರ್ನರ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಒಮರ್ ಅಬ್ದುಲ್ಲಾ, ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ನಿಗದಿಪಡಿಸುವಂತೆ ಮನವಿ ಮಾಡಲಾಗಿದೆ. ಬುಧವಾರ ಪದ ಗ್ರಹಣ ಸಮಾರಂಭ ನಡೆಯುವ ಸಾಧ್ಯತೆಯಿದೆ ಎಂದರು.
ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿ ಕಾಂಗ್ರೆಸ್, ಸಿಪಿಎಂ, ಎಎಪಿ ಮತ್ತು ಪಕ್ಷೇತರ ಶಾಸಕರಿಂದ ಪಡೆದ ಬೆಂಬಲ ಪತ್ರಗಳನ್ನು ಹಸ್ತಾಂತರಿಸಿದೆ. ಪ್ರಮಾಣವಚನ ಸಮಾರಂಭದ ದಿನಾಂಕವನ್ನು ನಿಗದಿಪಡಿಸುವಂತೆ ಅವರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.
ಇಲ್ಲಿ ಕೇಂದ್ರದ ನಿಯಮವಿರುವುದರಿಂದ ಎಲ್‌ಜಿಯವರು ಮೊದಲು ದಾಖಲೆಗಳನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸುತ್ತಾರೆ. ಅದು 2-3 ದಿನಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಲಾಗಿದೆ. ಬುಧವಾರ ಪದ ಗ್ರಹಣ ಸಮಾರಂಭ ನಡೆಯುವ ಸಾಧ್ಯತೆಯಿದೆ. ಈ ಸರ್ಕಾರದಲ್ಲಿ ಜಮ್ಮುವನ್ನು ನಿರ್ಲಕ್ಷಿಸುವುದಿಲ್ಲ ಎಂದು ಎಲ್ಲರಿಗೂ ಹೇಳಲು ಬಯಸುತ್ತೇನೆ ಎಂದರು.
Advertisement