ಮಹಾರಾಷ್ಟ್ರ: ಆರ್‌ಎಸ್‌ಎಸ್ ಮೆರವಣಿಗೆ ವೇಳೆ ಉದ್ವಿಗ್ನತೆ, ಎರಡು ಕೇಸ್ ದಾಖಲು

ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ದೂರು ಆಧರಿಸಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದೇವೆ, ಐವರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರಿಗೆ ನೋಟಿಸ್ ಜಾರಿ ಮಾಡಿದ್ದೇವೆ, ಇದುವರೆಗೆ ಯಾರನ್ನೂ ಬಂಧಿಸಿಲ್ಲ
ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿದ್ದ ಆರ್ ಎಸ್ ಎಸ್ ಬೆಂಬಲಿಗರು
ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿದ್ದ ಆರ್ ಎಸ್ ಎಸ್ ಬೆಂಬಲಿಗರು
Updated on

ರತ್ನಗಿರಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮೆರವಣಿಗೆ ವೇಳೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಘೋಷಣೆ ಕೂಗಿದ ನಂತರ ಉದ್ವಿಗ್ನ ಪರಿಸ್ಥಿತಿವೇರ್ಪಟ್ಟ ಘಟನೆ ಮಹಾರಾಷ್ಟ್ರದ ರತ್ನಗಿರಿ ನಗರದಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ಕೊಂಕಣನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರು ಕೆಲ ಸಮಯದ ನಂತರ ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದಾರೆ.

ಈ ಸಂಬಂಧ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ದೂರು ಆಧರಿಸಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದೇವೆ, ಐವರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರಿಗೆ ನೋಟಿಸ್ ಜಾರಿ ಮಾಡಿದ್ದೇವೆ, ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಎಂದು ರತ್ನಗಿರಿ ನಗರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಸರಾ ಹಬ್ಬದ ಮುನ್ನಾದಿನದಂದು ಆರ್‌ಎಸ್‌ಎಸ್ ಈ ಪ್ರದೇಶದಲ್ಲಿ ಮೆರವಣಿಗೆ (ಪಥ ಸಂಚಲನ) ನಡೆಸಿದಾಗ ಅಲ್ಪಸಂಖ್ಯಾತ ಸಮುದಾಯದ ಜನರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಘೋಷಣೆಗಳನ್ನು ಕೂಗಿದ್ದರಿಂದ ಉದ್ವಿಗ್ನ ಪರಿಸ್ಥಿತಿವೇರ್ಪಟ್ಟಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿದ್ದ ಆರ್ ಎಸ್ ಎಸ್ ಬೆಂಬಲಿಗರು
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಖ್ಯಾತ ನಟ ಸಯಾಜಿ ಶಿಂಧೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರ್ಪಡೆ

ಯಾವುದೇ ಹಿಂಸಾಚಾರ ನಡೆದಿಲ್ಲ, ತಡರಾತ್ರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಆರ್ ಎಸ್ ಎಸ್ ಪರ ಬೆಂಬಲಿಗರು ಘಟನೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲಿಸಲು ಒತ್ತಾಯಿಸಿದರು. ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳಡಿ ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com