
ನವದೆಹಲಿ: ಮುಂಬೈಯಲ್ಲಿ NCP ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆಯು ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಪ್ರತಿಪಕ್ಷಗಳು ಪ್ರಶ್ನಿಸುವಂತೆ ಮಾಡಿದೆ. ಸಿದ್ದಿಕ್ಕಿ ಹತ್ಯೆ ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ತೋರಿಸುತ್ತಿದ್ದು, ಘಟನೆ ಕುರಿತು ಪಾರದರ್ಶಕ ರೀತಿಯಲ್ಲಿ ತನಿಖೆ ನಡೆಯಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದಿಕಿ ಅವರ ದುರಂತದ ಸಾವು ಪದಗಳಿಗೆ ಮೀರಿದ ಆಘಾತಕಾರಿಯಾಗಿದೆ. ಅವರ ಸಾವಿಗೆ ನ್ಯಾಯ ಸಿಗಬೇಕು. ಮಹಾರಾಷ್ಟ್ರ ಸರ್ಕಾರ ಸಂಪೂರ್ಣ ಮತ್ತು ಪಾರದರ್ಶಕ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರನ್ನು ಆದಷ್ಟು ಬೇಗ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಸಿದ್ದಿಕಿ ಹತ್ಯೆಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಆರೋಪಿಸಿದ್ದಾರೆ.
ಸಿದ್ದಿಕಿ ಅವರು ಜೀವ ಬೆದರಿಕೆಯ ಬಗ್ಗೆ ಹಲವು ಸಂದರ್ಭಗಳಲ್ಲಿ ಅಧಿಕಾರಿಗಳು ತಿಳಿಸಿದ್ದರು ಮತ್ತು ಅವರು ವೈ-ಪ್ಲಸ್ ಭದ್ರತೆಯಲ್ಲಿದ್ದರೂ ಸಹ ಪ್ರಾಣ ಕಳೆದುಕೊಂಡಿದ್ದಾರೆ. ರಸ್ತೆಯಲ್ಲಿ, ಗದ್ದಲದ ಮಾರುಕಟ್ಟೆ ಮಧ್ಯದಲ್ಲಿ ಗುಂಡಿನ ದಾಳಿ ನಡೆದಿರುವುದು ಕ್ರಿಮಿನಲ್ ಗಳು ಇನ್ನು ಮುಂದೆ ಮಹಾರಾಷ್ಟ್ರದಲ್ಲಿ ಕಾನೂನಿಗೆ ಹೆದರುವುದಿಲ್ಲ ಎಂಬುದನ್ನು ತೋರಿಸುತ್ತದೆ. ಆಡಳಿತಾರೂಢ ಮೈತ್ರಿ ಪಕ್ಷದ ನಾಯಕರು ಸಹ ರಾಜಧಾನಿಯ ಹೃದಯಭಾಗದಲ್ಲಿ ಸುರಕ್ಷಿತವಾಗಿಲ್ಲ. ಇಂತಹ ಪಕ್ಷದ ಹಿರಿಯ ನಾಯಕರೇ ಹತ್ಯೆಯಾದರೆ ಇನ್ನೂ ಸಾಮಾನ್ಯ ಜನರು ಹೇಗೆ ಸುರಕ್ಷಿತವಾಗಿ ಬಾಳಬೇಕು ಎಂಬ ಬಗ್ಗೆ ಆಡಳಿತರೂಢ ಪಕ್ಷ ಉತ್ತರಿಸುವಂತೆ ಅವರು ಹೇಳಿದ್ದಾರೆ.
ಬಾಬಾ ಸಿದ್ದಿಕಿ ಅವರ ಹತ್ಯೆಯ ಬಗ್ಗೆ ಕೇಳಿ ಪದಗಳಿಗೆ ಮೀರಿದ ಆಘಾತವಾಗಿದೆ ಎಂದು ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಎಕ್ಸ್ ನಲ್ಲಿ ಹೇಳಿದ್ದಾರೆ. 1999 ರಲ್ಲಿ ಸುನೀಲ್ ದತ್ ಅವರೊಂದಿಗೆ ಮೊದಲು ಅವರನ್ನು ಭೇಟಿಯಾಗಿದ್ದೆ. ಅವರ ಅಗಲಿಕೆ ವೈಯಕ್ತಿಕವಾಗಿ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
Advertisement