ಮುಂಬೈ: ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಮುಂಬೈನಿಂದ 239 ಪ್ರಯಾಣಿಕರನ್ನು ಹೊತ್ತುಕೊಂಡು ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಸೋಮವಾರ ದೆಹಲಿ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು,
ಪ್ರಸ್ತುತ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಇಳಿದು ವಿಮಾನವನ್ನು ಶೋಧಿಸಲಾಗುತ್ತಿದೆ.
ವಿಮಾನವು ಪ್ರಸ್ತುತ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದು ತಂಗಿದೆ. ವಿಮಾನದಲ್ಲಿರುವ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಶಿಷ್ಠಾಚಾರದ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟ್ವೀಟ್ ಮೂಲಕ ಬೆದರಿಕೆ ಬಂದಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ ಎಂದು ಏರ್ ಹೇಳಿಕೆ ಬಿಡುಗಡೆ ಮಾಡಿದೆ. ಅಕ್ಟೋಬರ್ 14 ರಂದು ಮುಂಬೈನಿಂದ ನ್ಯೂಯಾರ್ಕ್ ಗೆ ಹಾರಾಟ ನಡೆಸುತ್ತಿದ್ದ ಎI119 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತು. ಸರ್ಕಾರದ ಭದ್ರತಾ ನಿಯಂತ್ರಣ ಸಮಿತಿಯ ಸೂಚನೆಗಳ ಮೇರೆಗೆ ದೆಹಲಿಗೆ ತಿರುಗಿಸಲಾಯಿತು.
ಎಲ್ಲಾ ಪ್ರಯಾಣಿಕರು ಇಳಿದು ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿದ್ದಾರೆ. ಏರ್ ಇಂಡಿಯಾ ತನ್ನ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗೆ ಬದ್ಧವಾಗಿ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಹೇಳಿಕೆ ತಿಳಿಸಿದೆ.
Advertisement