
ಬಾಲಾಘಾಟ್: ಮಧ್ಯಪ್ರದೇಶದ ಮಾವೋವಾದಿ ಪೀಡಿತ ಬಾಲಾಘಾಟ್ ಜಿಲ್ಲೆಯಲ್ಲಿ ಭಾನುವಾರ ಗಸ್ತು ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಯೋಧರೊಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೆರೆಯ ಛತ್ತೀಸ್‌ಗಢದ ಧಮ್ತಾರಿ ಮೂಲದ ತಾರಕೇಶ್ವರ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಬಾಲಘಾಟ್ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ಸಿಂಗ್ ತಿಳಿಸಿದ್ದಾರೆ.
ಗಾಯಾಳುಗಳು ನೆರೆಯ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.
ಸಿಆರ್‌ಪಿಎಫ್‌ನ 7ನೇ ಡಿ ಕಂಪನಿ 4ಕ್ಕೆ ಸೇರಿದ ಸಂತ್ರಸ್ತರು ಗಸ್ತು ಕಾರ್ಯದಲ್ಲಿದ್ದಾಗ ಜಿಲ್ಲಾ ಕೇಂದ್ರದಿಂದ 100 ಕಿಮೀ ದೂರದಲ್ಲಿರುವ ಕುಡಾನ್ ಗ್ರಾಮದ ಬಳಿ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದಿರುವುದಾಗಿ ಅವರು ಮಾಹಿತಿ ನೀಡಿದರು.
ಅಪಘಾತದ ನಂತರ ಬಾಡಿಗೆ ಖಾಸಗಿ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಅವರು ತಿಳಿಸಿದರು.
Advertisement