ಜಮ್ಮು-ಕಾಶ್ಮೀರ: ಹೊಸ ಸರ್ಕಾರ ರಚನೆಗೂ ಮುನ್ನ ರಾಷ್ಟ್ರಪತಿ ಆಳ್ವಿಕೆ ರದ್ದು!

ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಔಪಚಾರಿಕವಾಗಿ ವಿಭಜಿಸಿದ ನಂತರ ಅಕ್ಟೋಬರ್ 31, 2019 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರ ಪತಿ ಆಳ್ವಿಕೆಯನ್ನು ಹೇರಲಾಗಿತ್ತು.
casual Images
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಭಾನುವಾರ ಹಿಂಪಡೆಯಲಾಗಿದ್ದು, ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 31, 2019ರ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಮರು ಸಂಘಟನೆ ಕಾಯ್ದೆಯ ಸೆಕ್ಷನ್ 54ರಡಿ ಮುಖ್ಯಮಂತ್ರಿ ನೇಮಕಕ್ಕೂ ಮುನ್ನಾ ತಕ್ಷಣವೇ ಹಿಂತೆಗೆದುಕೊಳ್ಳಲಾಗುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದ್ದು, ಸರ್ಕಾರ ರಚನೆಗೆ ಸಜ್ಜಾಗಿದೆ. ಎನ್‌ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.

ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಔಪಚಾರಿಕವಾಗಿ ವಿಭಜಿಸಿದ ನಂತರ ಅಕ್ಟೋಬರ್ 31, 2019 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರ ಪತಿ ಆಳ್ವಿಕೆಯನ್ನು ಹೇರಲಾಗಿತ್ತು.

casual Images
ಜಮ್ಮು-ಕಾಶ್ಮೀರ: ಲೆಫ್ಟಿನೆಂಟ್ ಗವರ್ನರ್ ಭೇಟಿ ಮಾಡಿದ ಒಮರ್ ಅಬ್ದುಲ್ಲಾ, ಸರ್ಕಾರ ರಚನೆಗೆ ಹಕ್ಕು ಮಂಡನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com