
ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯ ಬಗ್ಗೆ ಚರ್ಚೆ ನಡೆಸಲು ಕರೆಯಲಾಗಿದ್ದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಿಂದ ವಿಪಕ್ಷ ನಾಯಕರು ಹೊರನಡೆದಿದ್ದಾರೆ. ಈ ಸಮಿತಿ ಕಾನೂನು ಪ್ರಕಾರ ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ಸಭೆ ಬಹಿಷ್ಕರಿಸಿದ್ದಾರೆ.
ಬಿಜೆಪಿ ಸದಸ್ಯರು ತಮ್ಮ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ, ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ಸಭೆಯಲ್ಲಿ ಸಂಸದೀಯ ನೀತಿ ಸಂಹಿತೆಯ ಸಂಪೂರ್ಣ ಉಲ್ಲಂಘನೆಯ ಕುರಿತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ವಿರೋಧ ಪಕ್ಷದ ಸಂಸದರು ಪತ್ರ ಬರೆದಿದ್ದಾರೆ. ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ, ಕಾಂಗ್ರೆಸ್‌ನಿಂದ ಗೌರವ್ ಗೊಗೊಯ್ ಮತ್ತು ಇಮ್ರಾನ್ ಮಸೂದ್, ಡಿಎಂಕೆಯ ಎ ರಾಜಾ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಶಿವಸೇನೆಯ (ಯುಬಿಟಿ) ಅರವಿಂದ್ ಸಾವಂತ್ ಮತ್ತು ಎಎಪಿಯ ಸಂಜಯ್ ಸಿಂಗ್ ಸಭೆಯನ್ನು ಬಹಿಷ್ಕರಿಸಿದ್ದಾರೆ.
ವಕ್ಫ್ ಮಸೂದೆ ಕುರಿತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಪ್ರತಿನಿಧಿಗಳಿಂದ ಸಮಿತಿಯು ಮಂಡನೆಯನ್ನು ಆಲಿಸುತ್ತಿರುವಾಗ ಗದ್ದಲ ಉಂಟಾಯಿತು. ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ಅಭಿಜಿತ್ ಗಂಗೂಲಿ ಅವರು ವಕ್ಫ್ ಬೋರ್ಡ್‌ಗಳಿಗೆ ಮಹಿಳೆಯರನ್ನು ಸೇರಿಸುವ ಪ್ರಸ್ತಾಪದ ಕುರಿತು ಬ್ಯಾನರ್ಜಿ ಮತ್ತು ಗೊಗೊಯ್ ಅವರೊಂದಿಗೆ ಗಲಾಟೆ ನಡೆಸಿದರು ಎಂದು ವರದಿಯಾಗಿದೆ. ಆದರೆ, ಸುಮಾರು ಒಂದು ಗಂಟೆಯ ನಂತರ ಪ್ರತಿಪಕ್ಷದ ಸದಸ್ಯರು ಮತ್ತೆ ಸಭೆ ಸೇರಿದರು. ಸ್ಥಾಪಿತ ಸಂಸದೀಯ ನಿಯಮಗಳಿಗೆ ಅನುಗುಣವಾಗಿ ಸಮಿತಿಯು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೊರನಡೆದ ನಂತರ ಸಾವಂತ್ ಸುದ್ದಿಗಾರರಿಗೆ ತಿಳಿಸಿದರು. ಅಧಿವೇಶನದಲ್ಲಿ ವೈಯಕ್ತಿಕ ಆರೋಪಗಳಿಗೆ ಅವಕಾಶ ನೀಡಲಾಗಿದೆ ಎಂದು ಅವರು ಪ್ರತಿಪಾದಿಸಿದರು, ವಿಶೇಷವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಂತಹ ಹಿರಿಯ ನಾಯಕರನ್ನು ಗುರಿಯಾಗಿಸಿಕೊಂಡು ಆರೋಪ ಮಾಡಲಾಗಿದೆ. ಸಮಿತಿಯು ತತ್ವಗಳು ಮತ್ತು ಮಾನದಂಡಗಳೊಂದಿಗೆ ಕಾರ್ಯನಿರ್ವಹಿಸುತ್ತಿಲ್ಲ ಹೀಗಾಗಿ ನಾವು ಬಹಿಷ್ಕರಿಸಿದ್ದೇ ಎಂದು ಅವರು ಹೇಳಿದರು. ಅಕ್ಟೋಬರ್ 14 ರಂದು ನಡೆದ ಸಭೆಯಲ್ಲಿ ಅಧ್ಯಕ್ಷೆ ಜಗದಾಂಬಿಕಾ ಪಾಲ್ ಅವರು ಸಂಸತ್ತಿನ ನೀತಿ ಸಂಹಿತೆ ಮತ್ತು ಕಾರ್ಯವಿಧಾನದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸದಸ್ಯರು ಸ್ಪೀಕರ್‌ಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.
Advertisement