
ಪಾಟ್ನಾ: ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದ ಶಂಕಿತ ನಕಲಿ ಮದ್ಯ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಇಬ್ಬರು ಅಸ್ವಸ್ಥರಾಗಿದ್ದಾರೆ. ಒಂದು ದಿನದ ಹಿಂದೆ, ನೆರೆಯ ಸರನ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಒಬ್ಬರು ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಅಸ್ವಸ್ಥರಾಗಿದ್ದರು.
ಮಂಗಳವಾರ ತಡರಾತ್ರಿ ಸಿವಾನ್ ಜಿಲ್ಲೆಯ ಭಗವಾನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಧಾರ್ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮೃತರು ಅಂಗಡಿಯೊಂದರಲ್ಲಿ ಜಮಾಯಿಸಿ ಸಂಜೆ ತಡವಾಗಿ ಮದ್ಯ ಸೇವಿಸಿದರು. ಮನೆಗೆ ತಲುಪಿದ ನಂತರ ದೃಷ್ಟಿ ದೋಷ, ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ವೇಳೆ ಆರು ಮಂದಿ ಮೃತಪಟ್ಟರೆ, ಏಳನೇ ವ್ಯಕ್ತಿ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ(ಪಿಎಂಸಿಎಚ್) ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದರು.
ಅರವಿಂದ್ ಸಿಂಗ್(40), ರಾಮೇಂದ್ರ ಸಿಂಗ್ (30), ಸಂತೋಷ್ ಮಹ್ತೋ(35), ಮುನ್ನಾ (32) ಮತ್ತು ಬ್ರಿಜ್ ಮೋಹನ್ ಸಿಂಗ್(38) ಅವರು ಸ್ಥಳೀಯ ಖಾಸಗಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಮಾಧಾರ್ ಗ್ರಾಮದ ನಿವಾಸಿ ಮೋಹನ್ ಶಾ(28) PMCH ಗೆ ಹೋಗುವ ದಾರಿಯಲ್ಲಿ ಮೃತಪಟ್ಟಿದ್ದಾರೆ.
ಉಳಿದ ಇಬ್ಬರು ಮೃತರು ಬಿಲಾಸ್‌ಪುರ ಮತ್ತು ಸರ್ಸಯ್ಯಾ ಗ್ರಾಮದ ನಿವಾಸಿಗಳಾಗಿದ್ದು, ಮಾಧರ್ ಗ್ರಾಮದಲ್ಲಿ ಅಕ್ರಮ ಮದ್ಯ ಸೇವಿಸಿದ್ದಾರೆ.
ಮಂಗಳವಾರ ತಡರಾತ್ರಿ ಅರವಿಂದ್ ಸಿಂಗ್ ಅವರ ಕುಟುಂಬ ಸದಸ್ಯರು ಅಂತ್ಯಕ್ರಿಯೆ ನೆರವೇರಿಸಿದರು ಎಂದು ಮೂಲಗಳು ತಿಳಿಸಿವೆ.
Advertisement