ಸುಪ್ರೀಂ ಕೋರ್ಟ್ ಮುಂದಿನ ಸಿಜೆಐ ಆಗಿ ಸಂಜೀವ್ ಖನ್ನಾ ಹೆಸರು ಶಿಫಾರಸು ಮಾಡಿದ ನ್ಯಾ.ಚಂದ್ರಚೂಡ್

CJI ಚಂದ್ರಚೂಡ್ ಅವರು ನವೆಂಬರ್ 10, 2024 ರಂದು ನಿವೃತ್ತರಾಗುತ್ತಾರೆ. ನ್ಯಾಯಮೂರ್ತಿ ಖನ್ನಾ ಅವರು 51 ನೇ CJI ಆಗಿರುತ್ತಾರೆ ಮತ್ತು 65 ನೇ ವಯಸ್ಸಿನಲ್ಲಿ ಮೇ 13, 2025 ರಂದು ನಿವೃತ್ತಿ ಹೊಂದಲಿದ್ದಾರೆ.
Sanjiv Khanna
ಸಂಜೀವ್ ಖನ್ನಾ
Updated on

ನವದೆಹಲಿ: ಸುಪ್ರೀಂಕೋರ್ಟ್ ನ ಮುಂದಿನ ಮುಖ್ಯ ನ್ಯಾಯಾಧೀಶರನ್ನಾಗಿ ಸುಪ್ರೀಂ ಕೋರ್ಟ್ ನ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶ ಸಂಜೀವ್ ಖನ್ನಾ ಅವರ ಹೆಸರನ್ನು ಕೇಂದ್ರ ಕಾನೂನು ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ.

ಈ ಶಿಫಾರಸನ್ನು ಕೇಂದ್ರ ಸರಕಾರ ಅಂಗೀಕರಿಸಿದರೆ ನ್ಯಾ.ಸಂಜೀವ್ ಖನ್ನಾ ಭಾರತದ ಸುಪ್ರೀಂ ಕೋರ್ಟ್ ನ 51ನೇ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ. CJI ಚಂದ್ರಚೂಡ್ ಅವರು ನವೆಂಬರ್ 10, 2024 ರಂದು ನಿವೃತ್ತರಾಗುತ್ತಾರೆ. ನ್ಯಾಯಮೂರ್ತಿ ಖನ್ನಾ ಅವರು 51 ನೇ CJI ಆಗಿರುತ್ತಾರೆ ಮತ್ತು 65 ನೇ ವಯಸ್ಸಿನಲ್ಲಿ ಮೇ 13, 2025 ರಂದು ನಿವೃತ್ತಿ ಹೊಂದಲಿದ್ದಾರೆ. ಒಂದು ವೇಳೆ ಅವರ ನೇಮಕವಾದರೆ ಆರು ತಿಂಗಳು ಮಂತ್ರ ಹುದ್ದೆಯಲ್ಲಿರುತ್ತಾರೆ.

ಮೇ 14, 1960 ರಂದು ಜನಿಸಿದ ನ್ಯಾಯಮೂರ್ತಿ ಖನ್ನಾ ಅವರು ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಕಾನೂನು ಕೇಂದ್ರದಲ್ಲಿ ಕಾನೂನು ಅಧ್ಯಯನ ಮಾಡಿದರು. ನ್ಯಾಯಮೂರ್ತಿ ಖನ್ನಾ ಅವರು 1983 ರಲ್ಲಿ ದೆಹಲಿಯ ಬಾರ್ ಕೌನ್ಸಿಲ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದರು. ದೆಹಲಿಯ ಜಿಲ್ಲಾ ನ್ಯಾಯಾಲಯಗಳಲ್ಲಿ ತಮ್ಮ ಕಾನೂನು ಅಭ್ಯಾಸ ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ, ಅವರು ಸಾಂವಿಧಾನಿಕ ಕಾನೂನು, ನೇರ ತೆರಿಗೆಗಳು, ಮಧ್ಯಸ್ಥಿಕೆ, ವಾಣಿಜ್ಯ ವಿಷಯಗಳು, ಕಂಪನಿ ಕಾನೂನು, ಭೂ ಕಾನೂನುಗಳು, ಪರಿಸರ ಮತ್ತು ಮಾಲಿನ್ಯ ಕಾನೂನುಗಳು ಮತ್ತು ವೈದ್ಯಕೀಯ ನಿರ್ಲಕ್ಷ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೈಕೋರ್ಟ್ ಮತ್ತು ನ್ಯಾಯಮಂಡಳಿಗಳಲ್ಲಿ ನಿಯಮಿತವಾಗಿ ಕೆಲಸ ಮಾಡಿದರು.

Sanjiv Khanna
ಸಮಾಜದಲ್ಲಿನ ಅಪರೂಪದ ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಸಿಜೆಐ ಕರೆ

ಅವರು ದೆಹಲಿ ಹೈಕೋರ್ಟ್‌ನಲ್ಲಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಹಲವಾರು ಕ್ರಿಮಿನಲ್ ಮೊಕದ್ದಮೆಗಳನ್ನು ವಾದಿಸಿದರು ಮತ್ತು ನ್ಯಾಯಾಲಯವು ಅವರನ್ನು ಅಮಿಕಸ್ ಕ್ಯೂರಿಯಾಗಿ ನೇಮಿಸಿದ ಪ್ರಕರಣಗಳಲ್ಲಿ ವಾದಿಸಿದರು.

ನ್ಯಾಯಮೂರ್ತಿ ಖನ್ನಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಆದಾಯ ತೆರಿಗೆ ಇಲಾಖೆಯ ಹಿರಿಯ ಸ್ಥಾಯಿ ವಕೀಲರಾಗಿ ಸುಮಾರು ಏಳು ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದರು. 2004 ರಲ್ಲಿ, ಅವರು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶಕ್ಕೆ ಸ್ಥಾಯಿ ಸಲಹೆಗಾರರಾಗಿ (ಸಿವಿಲ್) ನೇಮಕಗೊಂಡರು.

2005 ರಲ್ಲಿ ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ ಅವರು 2006 ರಲ್ಲಿ ಖಾಯಂ ನ್ಯಾಯಾಧೀಶರಾದರು. ದೆಹಲಿ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿರುವಾಗ, ಅವರು ದೆಹಲಿ ನ್ಯಾಯಾಂಗ ಅಕಾಡೆಮಿ, ದೆಹಲಿ ಅಂತರರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಮತ್ತು ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರಗಳೊಂದಿಗೆ ಸಕ್ರಿಯವಾಗಿ ಸಂಬಂಧ ಹೊಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com