
ಚಂಢೀಗಡ: ಚಂಢೀಗಡ: 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆದ್ದು, ಸತತ ಮೂರನೇ ಅವಧಿಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಅಧಿಕಾರಕ್ಕೆ ಬಂದಿದ್ದು, ಎರಡನೇ ಅವಧಿಗೆ ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಪಂಚಕುಲದಲ್ಲಿ ನಡೆದ ಸಮಾರಂಭದಲ್ಲಿ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸೈನಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಸೈನಿ ಅವರೊಂದಿಗೆ ಅಂಬಾಲಾ ಕ್ಯಾಂಟ್ ಶಾಸಕ ಅನಿಲ್ ವಿಜ್, ಇಸ್ರಾನಾ ಶಾಸಕ ಕ್ರಿಶನ್ ಲಾಲ್ ಪನ್ವಾರ್ ಮತ್ತು ಬಾದಶಹಪುರ ಶಾಸಕ ರಾವ್ ನರಬೀರ್ ಸಿಂಗ್ ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಸೈನಿ ಅವರು ಪ್ರಮಾಣವಚನ ಸ್ವೀಕರಿಸುವ ಮುನ್ನ ವಾಲ್ಮೀಕಿ ಭವನಕ್ಕೆ ಭೇಟಿ ನೀಡಿದರು ಮತ್ತು ಪಂಚಕುಲದ ಗುರುದ್ವಾರ ಹಾಗೂ ಮಾನಸಾ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಬಿಜೆಪಿ ನಾಯಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಬಿಜೆಪಿ ಆಡಳಿತವಿರುವ ವಿವಿಧ ರಾಜ್ಯಗಳ ಹದಿಮೂರು ಮುಖ್ಯಮಂತ್ರಿಗಳು ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು.
Advertisement