ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಅಬ್ಬಾಸ್ ಅನ್ಸಾರಿಗೆ ಸುಪ್ರೀಂ ಕೋರ್ಟ್ ಜಾಮೀನು

ದಿವಂಗತ ಗ್ಯಾಂಗ್​ಸ್ಟರ್ - ರಾಜಕಾರಣಿ ಮತ್ತು ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ಪುತ್ರ ಅಬ್ಬಾಸ್ ಅನ್ಸಾರಿ ನವೆಂಬರ್ 2022 ರಿಂದ ಜೈಲಿನಲ್ಲಿದ್ದಾರೆ.
ಅಬ್ಬಾಸ್ ಅನ್ಸಾರಿ
ಅಬ್ಬಾಸ್ ಅನ್ಸಾರಿ
Updated on

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಬ್ಬಾಸ್ ಅನ್ಸಾರಿ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ದಿವಂಗತ ಗ್ಯಾಂಗ್​ಸ್ಟರ್ - ರಾಜಕಾರಣಿ ಮತ್ತು ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ಪುತ್ರ ಅಬ್ಬಾಸ್ ಅನ್ಸಾರಿ ನವೆಂಬರ್ 2022 ರಿಂದ ಜೈಲಿನಲ್ಲಿದ್ದಾರೆ. ಅವರ ತಂದೆ ಕೆಲವು ತಿಂಗಳ ಹಿಂದೆ ಕಸ್ಟಡಿಯಲ್ಲಿ ನಿಧನರಾಗಿದ್ದರು.

ಜಾಮೀನು ನಿರಾಕರಿಸಿದ ಅಲಹಾಬಾದ್ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಅನ್ಸಾರಿ ಸಲ್ಲಿಸಿದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠ, ಅಬ್ಬಾಸ್ ಅನ್ಸಾರಿಗೆ ಬಿಗ್ ರಿಲೀಫ್ ನೀಡಿದೆ.

ಅಲಹಾಬಾದ್ ಹೈಕೋರ್ಟ್ ಮೇ 9 ರಂದು ಅನ್ಸಾರಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಅಬ್ಬಾಸ್ ಅನ್ಸಾರಿ
ಮುಖ್ತಾರ್ ಅನ್ಸಾರಿ ಕುಟುಂಬ ಭೇಟಿ ಮಾಡಿದ ಅಖಿಲೇಶ್; ಗ್ಯಾಂಗ್‏ಸ್ಟರ್-ರಾಜಕಾರಣಿ ಸಾವಿನ ಬಗ್ಗೆ ಶಂಕೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com