ರಾಜಸ್ಥಾನ: ಆಟೋ-ಬಸ್ ನಡುವೆ ಭೀಕರ ಅಪಘಾತ; 8 ಮಕ್ಕಳು ಸೇರಿ 12 ಮಂದಿ ದಾರುಣ ಸಾವು

ಮೃತರಲ್ಲಿ 8 ಮಕ್ಕಳಿದ್ದಾರೆ, ಅವರಲ್ಲಿ ಐವರು ಗಂಡು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ.
collision between auto-rickshaw and bus
ಆಟೋ-ಬಸ್ ನಡುವೆ ಅಪಘಾತ
Updated on

ಜೈಪುರ: ರಾಜಸ್ಥಾನದ ಧೋಲ್ಪುರದಲ್ಲಿ ಆಟೋ ರಿಕ್ಷಾ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 8 ಮಕ್ಕಳು ಸೇರಿದಂತೆ ಒಟ್ಟು 12 ಮಂದಿ ಸಾವನ್ನಪ್ಪಿದ್ದಾರೆ

ಕರೌಲಿ-ಧೋಲ್ಪುರ್ ಹೆದ್ದಾರಿ NH-11B ಯ ಸುನಿಪುರ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಮೃತರಲ್ಲಿ 8 ಮಕ್ಕಳಿದ್ದಾರೆ, ಅವರಲ್ಲಿ ಐವರು ಗಂಡು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಮಾಹಿತಿ ಪ್ರಕಾರ ಆಟೋ ಸವಾರ ಬರಿ ನಗರದ ಗುಮತ್ ಮೊಹಲ್ಲಾ ನಿವಾಸಿ. ಬರೌಲಿ ಗ್ರಾಮದಲ್ಲಿ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೂ ಹಿಂತಿರುಗುತ್ತಿದ್ದರು. ಅಷ್ಟರಲ್ಲಿ ಈ ಅವಘಡ ಸಂಭವಿಸಿದೆ. ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

collision between auto-rickshaw and bus
ತಮಿಳುನಾಡು ರೈಲು ಅಪಘಾತ: NIA ತನಿಖೆ ಆರಂಭ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com