ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳಿಹೆ ಸರಣಿ ಬಾಂಬ್ ಬೆದರಿಕೆಗಳು ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 70ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.
ಏರ್ ಇಂಡಿಯಾ, ವಿಸ್ತಾರಾ ಮತ್ತು ಇಂಡಿಗೋದ ತಲಾ 20 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದರೆ, ಆಕಾಶ ಏರ್‌ನ ಸುಮಾರು 14 ವಿಮಾನಗಳಿಗೆ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.
ಕಳೆದ 11 ದಿನಗಳಲ್ಲಿ, ಭಾರತೀಯ ವಿಮಾನಯಾನ ಸಂಸ್ಥೆಗಳ ಸುಮಾರು 250 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ.
ಅಕ್ಟೋಬರ್ 24 ರಂದು ಕಾರ್ಯನಿರ್ವಹಿಸುವ ಕೆಲವು ವಿಮಾನಗಳು ಭದ್ರತಾ ಎಚ್ಚರಿಕೆಗಳು ಬಂದಿವೆ ಎಂದು ಆಕಾಶ ಏರ್ ವಕ್ತಾರರು ತಿಳಿಸಿದ್ದಾರೆ.
"ಆಕಾಸ ಏರ್ ಎಮರ್ಜೆನ್ಸಿ ರೆಸ್ಪಾನ್ಸ್ ತಂಡಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿವೆ ಮತ್ತು ಭದ್ರತೆ ಮತ್ತು ನಿಯಂತ್ರಣ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿವೆ. ನಾವು ಸ್ಥಳೀಯ ಅಧಿಕಾರಿಗಳ ಸಮನ್ವಯದಲ್ಲಿ ಎಲ್ಲಾ ಸುರಕ್ಷತೆ ಮತ್ತು ಭದ್ರತಾ ಕಾರ್ಯವಿಧಾನಗಳನ್ನು ಅನುಸರಿಸುತ್ತಿದ್ದೇವೆ" ಎಂದು ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ, ನಾಗರಿಕ ವಿಮಾನಯಾನ ಸಚಿವ ಕೆ ರಾಮಮೋಹನ್ ನಾಯ್ಡು ಅವರು, ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆಯ ನಿದರ್ಶನಗಳನ್ನು ಎದುರಿಸಲು ಕಠಿಣ ಕಾನೂನು ಜಾರಿಗೆ ತರಲು ಸರ್ಕಾರ ಯೋಜಿಸಿದೆ. ಬೆದರಿಕೆ ಹಾಕುವವರನ್ನು ನೊ-ಫ್ಲೈ ಪಟ್ಟಿಗೆ ಸೇರಿಸಲಾಗುವುದು ಎಂದು ಹೇಳಿದ್ದರು.
Advertisement