ಕಾಶ್ಮೀರದಲ್ಲಿ ಹಿಂಸಾಚಾರಕ್ಕೆ ಬ್ರೇಕ್, ಉಗ್ರರ ಮಟ್ಟ ಹಾಕುತ್ತೇವೆ: ಉತ್ತರ ಸೇನಾ ಕಮಾಂಡರ್

"ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ" ಎಂದು ಸೇನಾ ಕಮಾಂಡರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
File photo
ಸಂಗ್ರಹ ಚಿತ್ರ
Updated on

ಉಧಮ್‌ಪುರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಸರಣಿ ಭಯೋತ್ಪಾದಕ ದಾಳಿಗಳ ಕುರಿತು ಶ್ರೀನಗರದಲ್ಲಿ ನಡೆದ ಏಕೀಕೃತ ಪ್ರಧಾನ ಕಚೇರಿ ಸಭೆಯಲ್ಲಿ ಕಾರ್ಯತಂತ್ರ ರೂಪಿಸಲಾಗಿದೆ ಎಂದು ಹಿರಿಯ ಸೇನಾ ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ.

ಸರಣಿ ಹಿಂಸಾಚಾರ ತಡೆಯಲು ಮತ್ತು ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಕಿತ್ತುಹಾಕಲು ಗಮನಹರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ ಉತ್ತರ ಸೇನೆಯ ಕಮಾಂಡರ್ ಲೆಫ್ಟಿನೆಂಟ್ ಜನರಲ್ MV ಸುಚೀಂದ್ರ ಕುಮಾರ್ ಅವರು, "ಈ ಕಾರ್ಯತಂತ್ರದ ತಿರುಳು ನಾಗರಿಕರು ಮತ್ತು ಸೈನಿಕರ ನಡುವಿನ ಸಂಬಂಧವನ್ನು ಬಲಪಡಿಸುತ್ತದೆ ಎಂದಿದ್ದಾರೆ.

ಹಿಂಸಾಚಾರದ ಚಕ್ರವನ್ನು ಮುರಿಯುವುದು, ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ಕಿತ್ತೊಗೆಯುವುದು, ಯುವಕರು ಮತ್ತು ಮಹಿಳೆಯರ ಸಬಲೀಕರಣ. ಶಿಕ್ಷಣವನ್ನು ಸುಗಮಗೊಳಿಸುವುದು, ಕ್ರೀಡೆಗಳನ್ನು ಉತ್ತೇಜಿಸುವುದು ಮತ್ತು ಈ ಪ್ರದೇಶದ ಶ್ರೀಮಂತ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸುವತ್ತ ಹೆಚ್ಚು ಗಮನ ಹರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

File photo
ಕಾಶ್ಮೀರ: ಗುಲ್ಮಾರ್ಗ್‌ನಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ; ಇಬ್ಬರು ಸೈನಿಕರು, ಇಬ್ಬರು ಪೋರ್ಟರ್‌ಗಳು ಹುತಾತ್ಮ

"ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ" ಎಂದು ಸೇನಾ ಕಮಾಂಡರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಿದ್ದು, ಗುರುವಾರ ಗುಲ್ಮಾರ್ಗ್‌ನಲ್ಲಿ ಸೇನಾ ವಾಹನದ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು ಮತ್ತು ಇಬ್ಬರು ಪೋರ್ಟರ್‌ಗಳು ಸಾವನ್ನಪ್ಪಿದ್ದರು.

ಅಕ್ಟೋಬರ್ 20 ರಂದು, ಗಂದೇರ್ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ನಿರ್ಮಾಣ ಸ್ಥಳದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದಾಗ ವೈದ್ಯರು ಮತ್ತು ಆರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com