
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಶನಿವಾರ ತನ್ನ 22 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆರು ಹಾಲಿ ಶಾಸಕರನ್ನು ಉಳಿಸಿಕೊಂಡಿದೆ ಮತ್ತು ಇಬ್ಬರನ್ನು ಕೈಬಿಟ್ಟಿದೆ.
ಶಿವಸೇನೆ ಮತ್ತು ಎನ್‌ಸಿಪಿ ಒಳಗೊಂಡ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಸದಸ್ಯರಾಗಿರುವ ಕೇಸರಿ ಪಕ್ಷ ಇದುವರೆಗೆ 121 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಎರಡನೇ ಪಟ್ಟಿಯಲ್ಲಿ, ಅಕೋಟ್, ನಾಸಿಕ್ ಸೆಂಟ್ರಲ್, ಪೆನ್, ಖಡಕ್ವಾಸಲಾ, ಪುಣೆ ಕಂಟೋನ್ಮೆಂಟ್ ಮತ್ತು ಉಲ್ಲಾಸನಗರದ ಶಾಸಕರಿಗೆ ಟಿಕೆಟ್ ನೀಡಿದ್ದು, ವಾಶಿಮ್ ಮತ್ತು ಗಡ್ಚಿರೋಲಿಯ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.
ಜಾಟ್‌ನಿಂದ ಗೋಪಿಚಂದ್ ಪಡಲ್ಕರ್ ಮತ್ತು ಲಾತೂರ್ ಗ್ರಾಮಾಂತರದಿಂದ ರಮೇಶ್ ಕರದ್ ಅವರನ್ನು ಕಣಕ್ಕಿಳಿಸಲಾಗಿದೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ.
Advertisement