ಮುಂಬೈ: ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ, 9 ಮಂದಿಗೆ ಗಾಯ
ಮುಂಬೈ: ಇಂದು ಭಾನುವಾರ ಬೆಳಗ್ಗೆ ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ರೈಲು ಹತ್ತುವ ವೇಳೆ ಉಂಟಾದ ನೂಕು ನುಗ್ಗಲಿನಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
ಬಾಂದ್ರಾ ಟರ್ಮಿನಸ್‌ನ ಪ್ಲಾಟ್‌ಫಾರ್ಮ್ ನಂಬರ್ ಒಂದರಲ್ಲಿ ಬೆಳಗ್ಗೆ 5.56ಕ್ಕೆ ಈ ಘಟನೆ ನಡೆದಿದೆ. 22921 ಬಾಂದ್ರಾ-ಗೋರಖ್‌ಪುರ ಎಕ್ಸ್‌ಪ್ರೆಸ್ ರೈಲು ಹತ್ತುವ ವೇಳೆ ವಿಪರೀತ ಜನದಟ್ಟಣೆ ಉಂಟಾಗಿತ್ತು ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿ ತಿಳಿಸಿದ್ದಾರೆ.
ಗಾಯಗೊಂಡ ಎಲ್ಲರನ್ನು ಭಾಭಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಶಭೀರ್ ಅಬ್ದುಲ್ ರೆಹಮಾನ್ (40ವ), ಪರಮೇಶ್ವರ ಸುಖದರ್ ಗುಪ್ತಾ (28ವ), ರವೀಂದ್ರ ಹರಿಹರ ಚುಮಾ (30ವ), ರಾಮಸೇವಕ ರವೀಂದ್ರ ಪ್ರಸಾದ್ ಪ್ರಜಾಪತಿ (29ವ), ಸಂಜಯ್ ತಿಲಕ್ರಂ ಕಾಂಗೇ (27ವ), ದಿವ್ಯಾಾಂಶು ಯೋಗೇಂದ್ರ ಯಾದವ್ (18ವ), ಮೊಹಮ್ಮದ್ ಎಂದು ಗುರುತಿಸಲಾಗಿದೆ. ಶರೀಫ್ ಶೇಖ್ (25ವ), ಇಂದ್ರಜಿತ್ ಸಹಾನಿ (19ವ) ಮತ್ತು ನೂರ್ ಮೊಹಮ್ಮದ್ ಶೇಖ್ (18ವ) ಎಂದು ಗುರುತಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ