
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನ ಹಳ್ಳಿಯೊಂದರಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ಇತ್ತೀಚೆಗೆ ದಾಳಿ ನಡೆಸಿದ್ದ ಉಗ್ರರನ್ನು ತಟಸ್ಥಗೊಳಿಸಲು ವಿಶೇಷ ಪಡೆಗಳನ್ನು ಸಜ್ಜುಗೊಳಿಸಲಾಗಿದ್ದು, ಸೋಮವಾರ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಶಸ್ತ್ರಾಸ್ತ್ರದೊಂದಿಗೆ ಒಬ್ಬ ಭಯೋತ್ಪಾದಕನ ದೇಹವನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ" ಎಂದು ಸೇನೆಯ ಜಮ್ಮು ಮೂಲದ ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.
ಇಂದು ಬಟಾಲ್ ಪ್ರದೇಶದಲ್ಲಿ ಉಗ್ರಗಾಮಿಗಳು ಸೈನಿಕರ ವಾಹನಗಳ ಮೇಲೆ ಹಲವು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಭದ್ರತಾ ಪಡೆಗಳು ತಕ್ಷಣವೇ ಈ ಪ್ರದೇಶವನ್ನು ಸುತ್ತುವರಿದು ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಗ್ಗೆ 6 ರಿಂದ 7 ಗಂಟೆಯ ಸುಮಾರಿಗೆ ಜೋಗ್ವಾನ್‌ನ ಅಸ್ಸಾನ್ ದೇವಸ್ಥಾನದ ಬಳಿ ಮುಖ್ಯ ರಸ್ತೆಯ ಮೂಲಕ ಹಾದು ಹೋಗುತ್ತಿದ್ದ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದಾಗ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ಭಾರತದೊಳಗೆ ನುಸುಳಿದ ಭಯೋತ್ಪಾದಕರು, ಸೇನಾ ಬೆಂಗಾವಲು ವಾಹನಗಳ ಮೇಲೆ ದಾಳಿ ನಡೆಸಿದ್ದರು.
Advertisement