ನವದೆಹಲಿ: ಕಸ್ಟಮ್ಸ್ ಸುಂಕ ವಿನಾಯಿತಿ ಮತ್ತು ಜಿಎಸ್‌ಟಿ ಕಡಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಮೂರು ಕ್ಯಾನ್ಸರ್ ನಿವಾರಕ ಔಷಧಿಗಳ ಬೆಲೆ ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರ ಮಂಗಳವಾರ ಕಂಪನಿಗಳಿಗೆ ಸೂಚಿಸಿದೆ.
ಕೈಗೆಟುಕುವ ಬೆಲೆಯಲ್ಲಿ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ಬದ್ಧತೆಗೆ ಅನುಗುಣವಾಗಿ, ರಾಷ್ಟ್ರೀಯ ಔಷಧೀ ಬೆಲೆ ಪ್ರಾಧಿಕಾರವು ಮೂರು ಕ್ಯಾನ್ಸರ್ ನಿವಾರಕ ಔಷಧಿಗಳಾದ ಟ್ರಾಸ್ಟುಜುಮಾಬ್, ಒಸಿಮೆರ್ಟಿನಿಬ್ ಮತ್ತು ದುರ್ವಾಲುಮಾಬ್ ಬೆಲೆ ಕಡಿಮೆ ಮಾಡುವಂತೆ ಸಂಬಂಧಿಸಿದ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ.
2024-25ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಈ ಮೂರು ಕ್ಯಾನ್ಸರ್ ನಿವಾರಕ ಔಷಧಿಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡುವುದಾಗಿ ಘೋಷಿಸಲಾಗಿತ್ತು. ಈಗ ಅದನ್ನು ಅನುಸರಿಸುವಂತೆ ಕಂಪನಿಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸಂಬಂಧ ಕಂದಾಯ ಇಲಾಖೆ, ಹಣಕಾಸು ಸಚಿವಾಲಯವು ಕಳೆದ ಜುಲೈ 23 ರಂದು ಅಧಿಸೂಚನೆ ಹೊರಡಿಸಿದ್ದು, ಈ ವರ್ಷ ಮೂರು ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೂನ್ಯಕ್ಕೆ ಇಳಿಸಿದೆ.
Advertisement