ಕಾಸರಗೋಡು: ದೇವಸ್ಥಾನ ಉತ್ಸವ ವೇಳೆ ಪಟಾಕಿ ದುರಂತ; 154 ಮಂದಿಗೆ ಗಾಯ, 10 ಜನರ ಸ್ಥಿತಿ ಗಂಭೀರ

ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿ ಉರಿದು 154 ಮಂದಿಗೆ ಗಾಯವಾಗಿದ್ದು, ಅವರಲ್ಲಿ 10 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
It is suspected that the accident occurred when the fireworks storage facility near Veerarkavu Temple caught fire.
ಪ್ರತ್ಯಕ್ಷದರ್ಶಿ ಖಾತೆಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಪಟಾಕಿ ಶೇಖರಣಾ ಘಟಕದಲ್ಲಿ ಪಟಾಕಿ ಸಿಡಿದು ದುರ್ಘಟನೆ ಸಂಭವಿಸಿದೆ. (Videograb)
Updated on

ಕಾಸರಗೋಡು: ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ನೆರೆಯ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ದೇವಸ್ಥಾನವೊಂದರ ಉತ್ಸವ ವೇಳೆ ಕಳೆದ ಮಧ್ಯರಾತ್ರಿ ನಡೆದಿದೆ.

ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿ ಉರಿದು 150 ಮಂದಿಗೆ ಗಾಯವಾಗಿದ್ದು, ಅವರಲ್ಲಿ 10 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಗಾಯಗೊಂಡವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು, ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರಿಗೆ ಶೇ.80ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಜಿಲ್ಲಾಧಿಕಾರಿ ಮಂಗಳವಾರ ತಿಳಿಸಿದರು.

ಅಪಘಾತಕ್ಕೆ ಕಾರಣವನ್ನು ಪತ್ತೆಹಚ್ಚಲಾಗುತ್ತಿದೆ. ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಪಟಾಕಿ ಸಂಗ್ರಹಣಾ ಕೇಂದ್ರ ಮತ್ತು ಪಟಾಕಿ ಸಿಡಿಸುವ ಸ್ಥಳವು ಹತ್ತಿರದಲ್ಲಿದೆ ಎಂದು ಹೇಳಿದ್ದಾರೆ.

ವೀರರ್ಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರಕ್ಕೆ ಬೆಂಕಿ ತಗುಲಿ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿರಲಿಲ್ಲ. ಇವೆರಡರ ನಡುವೆ ಕನಿಷ್ಠ 100 ಮೀಟರ್ ಅಂತರವನ್ನು ಕಾಯ್ದುಕೊಳ್ಳುವ ಅವಶ್ಯಕತೆಯನ್ನು ಅನುಸರಿಸಿಲ್ಲ. ಪಟಾಕಿಗಳನ್ನು ಸಂಗ್ರಹಿಸಲು ಯಾವುದೇ ಅನುಮತಿಯನ್ನು ತೆಗೆದುಕೊಂಡಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೇವಸ್ಥಾನದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ಕಾಸರಗೋಡು ಸಂಸದ ರಾಜಮೋಹನ್ ಉನ್ನಿತಾನ್ ಘಟನೆಯ ಬಗ್ಗೆ ವಿಸ್ತೃತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com