
ಮುಂಬೈ: ಬಿಜೆಪಿ ವಕ್ತಾರೆ ಶೈನಾ ಎನ್‌ಸಿ ತಮ್ಮ ಪಕ್ಷಕ್ಕೆ ರಾಜೀನಾಮೆ ನೀಡಿ ಮುಂಬೈನ ಮುಂಬಾದೇವಿ ವಿಧಾನಸಭಾ ಕ್ಷೇತ್ರದಿಂದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸುವ ಮುನ್ನ ಶೈನಾ ಅವರು ನವೆಂಬರ್ 20 ರಂದು ನಡೆಯಲಿರುವ ಚುನಾವಣೆಯ ಪ್ರಚಾರಕ್ಕಾಗಿ ಆಶೀರ್ವಾದ ಪಡೆಯಲು ಮುಂಬೈನ ದೇವತೆ ಮುಂಬಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಮುಂಬಾದೇವಿಯಿಂದ ಕಾಂಗ್ರೆಸ್‌ನ ಅಮೀನ್ ಪಟೇಲ್ ವಿರುದ್ಧ ಶೈನಾ ಕಣಕ್ಕಿಳಿಯಲಿದ್ದಾರೆ.
"ನಾನು ಮುಂಬಾದೇವಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದೇನೆ. ಬಿಜೆಪಿಗೆ ರಾಜೀನಾಮೆ ನೀಡಿ ಶಿವಸೇನೆ ಸೇರಿದ್ದೇನೆ" ಎಂದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರ ನೇತೃತ್ವದಲ್ಲಿ ರಾಜ್ಯ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟವು ಗೆಲುವು ಸಾಧಿಸಲಿದೆ ಎಂದು ಅವರು ಪ್ರತಿಪಾದಿಸಿದರು.
ನಾಮಪತ್ರ ಸಲ್ಲಿಸಿದ ವೇಳೆ ನೆರೆದಿದ್ದ ಜನರ, ಕಾರ್ಯಕರ್ತರ ಉತ್ಸಾಹ ಹಾಗೂ ಮಹಾಯುತಿಯ ಮೇಲಿನ ಅಚಲ ನಂಬಿಕೆಯಿಂದ ರಾಜ್ಯದಲ್ಲಿ ಮತ್ತೆ ಮಹಾಯುತಿ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ ಎಂಬುದು ಸ್ಪಷ್ಟವಾಗಿದೆ ಎಂದು "ಶೈನಾ ಹೇಳಿದ್ದಾರೆ.
Advertisement