ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವಬೆದರಿಕೆ: 2 ಕೋಟಿ ರೂ ಬೇಡಿಕೆ
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವಬೆದರಿಕೆ ಹಾಗೂ 2 ಕೋಟಿ ರೂಪಾಯಿಗೆ ಬೆದರಿಕೆಯೊಡ್ಡಲಾಗಿದೆ. ಬೆದರಿಕೆ ಆಧಾರದ ಮೇಲೆ ಮುಂಬೈ ಪೊಲೀಸರು ಬುಧವಾರ ಅಪರಿಚಿತ ವ್ಯಕ್ತಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಮುಂಬೈ ನಗರ ಸಂಚಾರ ಪೊಲೀಸರಿಗೆ ನಿನ್ನೆ ಮಂಗಳವಾರ ಅನಾಮಧೇಯ ಸಂದೇಶವೊಂದು ಬಂದಿದ್ದು, ಸಲ್ಮಾನ್ ಖಾನ್ 2 ಕೋಟಿ ರೂಪಾಯಿ ನೀಡಬೇಕು, ಕೊಡದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಹೆಲ್ಪ್‌ಲೈನ್ ಡೆಸ್ಕ್‌ಗೆ ಸಲ್ಮಾನ್ ಖಾನ್ 5 ಕೋಟಿ ರೂಪಾಯಿ ನೀಡಬೇಕು, ಇಲ್ಲದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಸಂದೇಶ ಬಂದಿತ್ತು. ಈ ಸಂಬಂಧ ಜೆಮ್‌ಶೆಡ್‌ಪುರದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಲ್ಮಾನ್ ಖಾನ್ ಮತ್ತು ಎನ್‌ಸಿಪಿ ನಾಯಕ ಜೀಶಾನ್ ಸಿದ್ದಿಕ್‌ಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರ ಪ್ರದೇಶದ ನೋಯ್ಡಾ ಮೂಲದ ವ್ಯಕ್ತಿಯನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದರು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಸಲ್ಮಾನ್ ಖಾನ್‌ಗೆ ಈ ಹಿಂದೆ ಕೊಲೆ ಬೆದರಿಕೆಗಳು ಬಂದಿದ್ದವು. ಗ್ಯಾಂಗ್‌ನ ಶಂಕಿತ ಸದಸ್ಯರು ಈ ವರ್ಷದ ಏಪ್ರಿಲ್‌ನಲ್ಲಿ ನಟನ ಬಾಂದ್ರಾ ಮನೆಯ ಹೊರಗೆ ಗುಂಡು ಹಾರಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ