
ಮುಂಬೈ: ರಿಯಲ್ ಎಸ್ಟೇಟ್ ಡೆವಲಪರ್ ಮತ್ತು ಅವರ ಪಾಲುದಾರರಿಂದ 10 ಕೋಟಿ ರೂ. ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ಮುಂಬೈನ ಬಾಂದ್ರಾದಲ್ಲಿ ಛೋಟಾ ರಾಜನ್ ಗ್ಯಾಂಗ್‌ನ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಸುಲಿಗೆ ಸಂಬಂಧ ರಿಯಲ್ ಎಸ್ಟೇಟ್ ಡೆವಲಪರ್ ಮತ್ತು ಅವರ ಪಾಲುದಾರರಿಂದ ಮುಂಬೈ ಅಪರಾಧ ವಿಭಾಗದ ಸುಲಿಗೆ ನಿಗ್ರಹ ದಳಕ್ಕೆ ದೂರು ಸಲ್ಲಿಕೆ ನಂತರ ಆರೋಪಿಗಳನ್ನು ಬಂಧಿಸಲಾಗಿದೆ. 10 ಕೋಟಿ ರೂ.ಗೆ ಆರೋಪಿಗಳು ನಿರಂತರವಾಗಿ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ.
ಡೆವಲಪರ್ ಮತ್ತು ಅವರ ಪಾಲುದಾರರು 55 ಲಕ್ಷ ರೂ.ಗಳನ್ನು ರಕ್ಷಣೆ ಹಣವಾಗಿ ಪಾವತಿಸಿದ್ದಾರೆ ಆದರೆ ಹೆಚ್ಚಿನ ಹಣಕ್ಕಾಗಿ ಬೆದರಿಕೆ ಕರೆ ಮುಂದುವರೆದಿತ್ತು ಎನ್ನಲಾಗಿದೆ. ಮಂಗಳವಾರ ಚೋಟಾ ರಾಜನ್ ಗ್ಯಾಂಗ್ ಸದಸ್ಯರು ರೂ. 5 ಲಕ್ಷ ನೀಡುವಂತೆ ಬೇಡಿಕೆಯಿಟ್ಟಿದ್ದರು.
ಬಾಂದ್ರಾ ವೆಸ್ಟ್‌ನಲ್ಲಿರುವ ಖಾಸಗಿ ಆಸ್ಪತ್ರೆಯೊಂದರ ಬಳಿ ಬಲೆ ಬೀಸಿದ ಪೊಲೀಸರು, ಹಣ ಸಂಗ್ರಹಿಸಲು ಅಲ್ಲಿಗೆ ಬಂದ ದರೋಡೆಕೋರರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement